The recent murder case in Narayanpur police station is a new twist

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಂಡಬಾವಿ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸೂಕ್ಷ್ಮವಾಗಿ ಕೊಲೆ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸ್ ಇಲಾಖೆ ಅಧಿಕಾರಿಗಳು ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಯಾದಗಿರಿ ಎಸ್‌ಪಿಯವರ ಆದೇಶದಂತೆ, ಸಿಪಿಐ ರವಿಕುಮಾರ್ ಹುಣಸಗಿ ವೃತ್ತ ಇವರ ತನಿಖೆ ಕೈಗೊಂಡು ಸತ್ಯಾಸತ್ಯತೆಯನ್ನು ಬಯಲಿಗೆಳೆದಿದ್ದಾರೆ.

ಮೃತ ವ್ಯಕ್ತಿಯ ಹೆಂಡತಿಯಾದ ರೇಣುಕಮ್ಮ ಗಂಡ ಗೌಡಪ್ಪ ಚವನಬಾವಿ ಸಾ. ಜೋಗಂಡಬಾವಿ ಅವರು ನೀಡಿದ ದೂರಿನ ಮೇರೆಗೆ ದಿನಾಂಕ 22 -4 – 2025 ರಂದು ಆರೋಪಿತರಾದ ನೀಲಪ್ಪ ತಂದೆ ಯಮನಪ್ಪ ಹಾಗೂ ಇನ್ನಿತರರು ಸಾ. ಜೋಗಂಡಬಾವಿ ಹಳೆಯ ವೈರತ್ವದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದರು.

ಈ ಕುರಿತು ತನಿಖೆ ಮುಂದುವರೆಸಿದ ಅಧಿಕಾರಿಗಳು ನಿಜ ಘಟನೆಯನ್ನು ಅರಿತು ದಿಗ್ಭ್ರಮೆಗೊಳಗಾಗಿದ್ದಾರೆ. ಗೌಡಪ್ಪನ ಅಕ್ಕನ ಮಗನಾದ ಸರಿಸುಮಾರು 14 ವರ್ಷದ ಬಾಲಕ (ಹೆಸರು ನಮೂದಿಸುವುದಿಲ್ಲ) ಬಡಿಗೆಯಿಂದ ತಲೆ ಹಿಂಬದಿಯಲ್ಲಿ ಹೊಡೆದಿರುತ್ತಾನೆ. ಈ ಪ್ರಕರಣವು ಕೆಂಭಾವಿ ಠಾಣೆ ವ್ಯಾಪ್ತಿಯ ಅಗತೀರ್ಥ ಸೀಮಾಂತರದಲ್ಲಿ ಕುರಿ ದೊಡ್ಡಿಯನ್ನು ಹಾಕಿರುತ್ತಾರೆ ಅಳಿಯ ಮತ್ತು ಮಾವನ ಮದ್ಯ ಯಾವುದೋ ವಿಷಯಕ್ಕೆ ಜಗಳವಾಡುತ್ತಾರೆ. ಆ ಜಗಳದಲ್ಲಿ ಅಳಿಯ ಮಾವನಿಗೆ ತಲೆ ಹಿಂಬದಿಯಲ್ಲಿ ಕಟ್ಟಿಗೆಯಿಂದ ಹೊಡೆದಿರುತ್ತಾನೆ. ಅದರೆ, ಈ ವಿಚಾರವನ್ನು ಸುಳ್ಳು ಕಟ್ಟುಕಥೆ ಕಟ್ಟಿ ಮತ್ತೊಬ್ಬರ ಮೇಲೆ ಪ್ರಕರಣ ದಾಖಲೆಯನ್ನು ಮಾಡಿಸಿರುತ್ತಾರೆ. ಈ ಘಟನೆಯಲ್ಲಿ ಕುಟುಂಬಸ್ಥರೇ ಆರೋಪಿಗಳಾಗಿದ್ದಾರೆ.

ಈ ಘಟನೆಯು ದಿನಾಂಕ 19- 4- 2025 ರಂದು ಸುಮಾರು 9:00 ಗಂಟೆ ರಾತ್ರಿ ವೇಳೆಯಲ್ಲಿ ನಡೆದಿದೆ. ಕುಟುಂಬಸ್ಥರೇ ಕೊಲೆ ಮಾಡಿ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಸಾಯಂಕಾಲ 4 ಗಂಟೆವರೆಗೆ ಶವವನ್ನಿಟ್ಟು ಪ್ರತಿಭಟನೆ ಮಾಡುತ್ತಾರೆ. ಬಾಗಲಕೋಟ ಆಸ್ಪತ್ರೆಯಿಂದ ತಂದು ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಪ್ರತಿಭಟನೆ ಮಾಡುದರ ಜೊತೆಗೆ ರಾತ್ರಿ 11 ಗಂಟೆ ನಂತರ ಶವವನ್ನು ತಗೆದುಕೊಂಡು ಹೋಗುತ್ತಾರೆ. ಪೊಲೀಸರೇ ಆರೋಪಿಗಳ ಎಂಬುವಂತೆ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಾರೆ.

ದಕ್ಷ ಅಧಿಕಾರಿ ರಾಜಶೇಖರ್ ರಾಠೋಡ ಪಿ.ಎಸ್.ಐ ನಾರಾಯಣಪುರ ಅವರ ವಿರುದ್ಧ ಶವವಿಟ್ಟು ಪ್ರತಿಭಟನೆ ಮಾಡಿ ಸುಳ್ಳು ಆರೋಪ ಮಾಡುತ್ತಾರೆ.

ವರದಿ : ಶಿವು ರಾಠೋಡ

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ