ಮುದ್ದೇಬಿಹಾಳ : ಪಟ್ಟಣದ ಜನನಿಬೀಡ ಪ್ರದೇಶವಾದ ಅಂಬೇಡ್ಕರ್ ಸರ್ಕಲ್ ಹತ್ತಿರದಲ್ಲಿರುವ ಬೇಕರಿಯೊಂದರ ಬಾಗಿಲು ಬೀಗ ಮುರಿದು ಒಳ ಹೊಕ್ಕಿರುವ ಕಳ್ಳನೋರ್ವ ತನಗೆ ಸಿಕ್ಕಿದ್ದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಅ.21ರ ರಾತ್ರಿ ನಡೆದಿದೆ.
ಪಟ್ಟಣದ ನಿವಾಸಿ ಅಲ್ಲಾಭಕ್ಷ ಬಿದರಕೋಟಿ ಎಂಬುವರಿಗೆ ಸೇರಿದ ಕೇಕ್ ಪ್ಯಾಲೇಸ್ ಬೇಕರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು ಘಟನಾವಳಿಯ ದೃಶ್ಯಗಳು ಅವರದ್ದೇ ಅಂಗಡಿಯಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅಂಗಡಿಕಾರ ಅಲ್ಲಾಭಕ್ಷ ಬಿದರಕೋಟಿ, ಅಂಗಡಿಯಲ್ಲಿಟ್ಟಿದ್ದ 30 ಸಾವಿರ ರೂಪಾಯಿಗಳನ್ನು ಕದ್ದೊಯ್ದಿದ್ದಾನೆ.ಶೆರ‍್ಸ್ನ ಬೀಗ ಮುರಿಯುವುದು, ಒಳಗಡೆ ಹೋಗಿ ಕ್ಯಾಶ್ ಕೌಂಟರ್‌ನಿAದ ಬ್ಯಾಗ್ ತೆಗೆದುಕೊಳ್ಳುವುದು,ಬಾಯಾರಿಕೆ ಆದಾಗ ನೀರಿನ ಬಾಟಲ್‌ನ್ನು ಕಳುವು ಮಾಡಿಕೊಂಡು ಹೋಗಿದ್ದಾನೆ ಎಂದು ತಿಳಿಸಿದ್ದಾರೆ.
ಪ್ರಕರಣದ ಕುರಿತು ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿ.ಎಸ್.ಐ ಆರ್.ಎಲ್.ಮನ್ನಾಭಾಯಿ
ಅವರನ್ನು ಮಾತನಾಡಿಸಿದಾಗ, ಘಟನೆ ಗಮನಕ್ಕೆ ಬಂದಿದ್ದು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿ ಪತ್ತೆಗೆ ಬಲೆ ಬೀಸಿದ್ದೇವೆ ಎಂದು ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಅತ್ಯಂತ ಜನನಿಬೀಡ ಪ್ರದೇಶದಲ್ಲಿ ಮಧ್ಯರಾತ್ರಿ ಯಾರ ಭಯವೂ ಇಲ್ಲದೇ ಮುಖಕ್ಕೆ ಮಾಸ್ಕ್ ಕೂಡ ಧರಿಸದೇ ಕಳುವು ಮಾಡಿರುವುದನ್ನು ಕಂಡಾಗ ಈತ ಬೇರೆ ಜಿಲ್ಲೆಯವನೇ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ : ಬೇಕರಿ ಅಂಗಡಿಯಲ್ಲಿ ಕಳ್ಳತನ
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ : ಬೇಕರಿ ಅಂಗಡಿಯಲ್ಲಿ ಕಳ್ಳತನ
Latest News
ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ
ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ
ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ
ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ
ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ
ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ
ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ
ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ
ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ
ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ
ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು







