Murder Case Image of murder symbol

ಪತ್ನಿಯನ್ನೇ ಕೊಲೆಗೈದ ಪಾಪಿ ಪತಿರಾಯ..! ಮುಂದೆ ಮಾಡಿದ್ದೇನು..?

ಪತ್ನಿಯನ್ನೇ ಕೊಲೆಗೈದ ಪಾಪಿ ಪತಿರಾಯ..! ಮುಂದೆ ಮಾಡಿದ್ದೇನು..?

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪತಿ-ಪತ್ನಿಯರ ನಡುವೆ ಉಂಟಾಗುತ್ತಿರುವ ಜಗಳ ಕೊಲೆಯಲ್ಲಿ ಅಂತ್ಯ ಕಾಣುತ್ತಿರುವುದು ದುರಂತವೇ ಸರಿ. ಇಂತಹದ್ದೇ ಒಂದು ದುರ್ಘಟನೆ ಈಗ ಬೆಳಕಿಗೆ ಬಂದಿದೆ.

ಶೀಲ ಶಂಕಿಸಿ ಪತ್ನಿಯ ಕತ್ತು ಹಿಸುಕಿ ಕೊಲೆ (Murder) ಮಾಡಿದ ಪತಿರಾಯ ತಾನೇ ಹೋಗಿ ಸಂಪಿಗೆಹಳ್ಳಿ ಪೊಲೀಸರಿಗೆ ಶರಣಾಗಿದ್ದಾನೆ.

ಬೆಂಗಳೂರಿನ ಹೆಗ್ಗಡೆ ನಗರದ 1ನೇ ಕ್ರಾಸ್‌ನಲ್ಲಿ ಪತ್ನಿ ವೇಲಾರಮಣಿ (35)ಯನ್ನು ಕೊಲೆಗೈದ ಪತಿ ಚಂದ್ರಶೇಖರ್ ಪೊಲೀಸರಿಗೆ ಶರಣಾಗಿದ ವ್ಯಕ್ತಿ.

ಮಂಗಳವಾರ ಬೆಳಗ್ಗೆ 11 ಗಂಟೆಯ ವೇಳೆ ಆರೋಪಿಯು ಪತ್ನಿ ಕೊಲೆ ಮಾಡಿ ಶರಣಾಗಿದ್ದು, ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಳೆದ 11 ವರ್ಷಗಳ ಹಿಂದೆ ವೇಲಾರಮಣಿ ಹಾಗೂ ಕ್ಯಾಬ್ ಚಾಲಕನಾಗಿದ್ದ ಚಂದ್ರಶೇಖರ್‌ಗೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ವೇಲಾರಮಣಿ ಖಾಸಗಿ ಕಂಪನಿಯಲ್ಲಿ ಆಕೌಂಟೆಂಟ್ ಆಗಿದ್ದಳು.

ಪತ್ನಿ ಫೋನ್‌ನಲ್ಲಿ ಯಾವಾಗಲೂ ಮಾತನಾಡುತ್ತಿರುವುದನ್ನು ನೋಡಿ ಚಂದ್ರಶೇಖರ್ ಹಲವು ದಿನಗಳಿಂದ ಆಕೆಯ ಬಗ್ಗೆ ಅನುಮಾನಿಸಿದ್ದ. ನಿನ್ನೆ ಇಬ್ಬರು ಮಕ್ಕಳು ಶಾಲೆಗೆ ಹೋದ ಮೇಲೆ ಗಂಡ-ಹೆಂಡತಿ ನಡುವೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಚಂದ್ರಶೇಖರ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಬಳಿಕ ಆರೋಪಿ ಗಂಡ ಸಂಪಿಗೆಹಳ್ಳಿ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ನಂತರ ಸ್ಥಳಕ್ಕೆ ತೆರಳಿದ ಸಂಪಿಗೇಹಳ್ಳಿ ಪೊಲೀಸರು, ಕೊಲೆ ಮಾಡಿದ ಸಳ ಪರಿಶೀಲನೆ ನಡೆಸಿ, ಆರೋಪಿ ಚಂದ್ರಶೇಖರ್ ನನ್ನು ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದಾರೆ.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ