ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ಲಿಂಗಸೂಗೂರು: ತಾಲೂಕಿನ ಬೆಂಡೋಣಿ ಗ್ರಾಮದ ಮಾಜಿ ಸೈನಿಕರಾದ ಯಲ್ಲಪ್ಪ ಹಲ್ಕಾವಟಗಿಯವರ ಪುತ್ರ ತೇಜಸ್ವಿ (24) ಆಗಸ್ಟ್ 6 ರಂದು ನಾರಾಯಣಪುರ ಚೆಕ್ ಪೋಸ್ಟ್ ಬಳಿಯ ಎಡದಂಡೆ ಕಾಲುವೆಗೆ (narayanpur canal) ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಇಂದು ಕೊಡೆಕಲ್ ದ ಬೂದಿಹಾಳ ಸೇತುವೆ ಹತ್ತಿರ ಯುವಕ ಶವವಾಗಿ ಪತ್ತೆಯಾದ ಪ್ರಕರಣ ನಡೆದಿದೆ.

Join Our Telegram: https://t.me/dcgkannada

ಲಿಂಗಸಗೂರು ಪಟ್ಟಣದ ಸಂಗಮೇಶ್ವರ ಕಾಲೇಜಿನಲ್ಲಿ ಬಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಮೃತ ಯುವಕ ತೇಜಸ್ವಿ ತನ್ನ ಸ್ನೇಹಿತನ ಜೊತೆ ಆಲಮಟ್ಟಿ ಹೋಗಿ ಮರಳಿ ಬರುವ ಸಮಯದಲ್ಲಿ ಮುಖ ತೊಳೆಯಲು ಎಂದು ನಾರಾಯಣಪುರ ಕ್ರಾಸ್ ಬಳಿಯ ಎಡದಂಡೆ ಕಾಲುವೆ (narayanpur canal) ಗೆ ಇಳಿದಾಗ ಕಾಲು ಜಾರಿ ಕಾಲುವೆಗೆ ಬಿದ್ದಿದ್ದು,ನೀರಿನ ಸುಳಿಗೆ ಸಿಲುಕಿ ಕೊಚ್ಚಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪೊಲೀಸರ ಅಸಹಕಾರ: ಕಾಲುವೆಗೆ ಬಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳೀಯ ನಾರಾಯಣಪುರ ಪೋಲೀಸ್ ಠಾಣೆ ಗೆ ಮಾಹಿತಿ ನೀಡಲು ಹೋದಾಗ ಈ ಘಟನೆ ನಮ್ಮ ವ್ಯಾಪ್ತಿಗೆ ಬರಲ್ಲ, ನಾಲತವಾಡ ಪೋಲಿಸ್ ಠಾಣೆ ವ್ಯಾಪ್ತಿಗೆ ಬರುತ್ತೆ ಎಂದು ಹೇಳಿದ್ದಾರೆ.

ನಂತರ ನಾಲತವಾಡ ಪೋಲಿಸ್ ಠಾಣೆಗೆ ತೆರಳಿ ಮಾಹಿತಿ ನೀಡಿದರೆ ಅವರು ಎಡದಂಡೆ ಕಾಲುವೆ (narayanpur canal) 100 ಮೀ ವ್ಯಾಪ್ತಿ ಬರುತ್ತೆ, ನೀವೂ ಮುದ್ದೇಬಿಹಾಳ ಠಾಣೆ ಬರುತ್ತೆ ಎಂದು ಹೇಳುವ ಮೂಲಕ ಪೋಲಿಸರು ಅಸಹಕಾರ ತೋರಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಶವ ಪತ್ತೆಯಾದ ತಕ್ಷಣ ಸ್ಥಳಕ್ಕೆ ಕೊಡೆಕಲ್ ಠಾಣೆಯ ಪೋಲಿಸರು ಭೇಟಿ ನೀಡಿದ್ದು, ಮರಣೋತ್ತರ ಪರಿಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದು ಅಂತ್ಯಕ್ರೀಯೆ ಇಂದು ಸಾಯಂಕಾಲ ಬೆಂಡೋಣಿ ಗ್ರಾಮದಲ್ಲಿ ನಡೆಯಲಿದೆ ಎಂದು ಮೃತನ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ