ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ ರಂಜಾನ್ ತಿಂಗಳಲ್ಲೇ ಈ ಯುದ್ಧ ನಡೆಯಬೇಕಾದ ಅವಶ್ಯಕತೆ ಇರಲಿಲ್ಲ.ಯುದ್ಧ ಕೊನೆಗೊಂಡು ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಪ್ರಾರ್ಥನೆ ಮಾಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಉರ್ದು ಶಾಲೆ ಆವರಣದಲ್ಲಿ ಶುಕ್ರವಾರ ದೇವಿಕಾ ಸುಬ್ಬರಾವ್ ಫೌಂಡೇಶನ್‌ದಿAದ ರಂಜಾನ್ ಹಬ್ಬದ ನಿಮಿತ್ಯ ಆಯೋಜನೆ ಮಾಡಿದ್ದ ಇಫ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದು ಮಾನವೀಯ ಧರ್ಮವನ್ನು ಸಾರುವ ಹಬ್ಬ ರಂಜಾನ್ ಆಗಿದೆ. ದೇವರ ಸಂಕಲ್ಪದ ಮೇರೆಗೆ ಇಲ್ಲಿ ಇಫ್ತಿಯಾರ್ ಕೂಟ ನಡೆಯುತ್ತಿದೆ.ಇದು ಯಾರ ವಯಕ್ತಿಕವಾಗಿಲ್ಲ ಎಂದು ಹೇಳಿದರು.
ಇಳಕಲ್ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಮಾತನಾಡಿ, ದೇವಭಯ ನಿಮ್ಮಲ್ಲಿ ಬೆಳೆದು ಬರಬೇಕು.ಉಪವಾಸದಿಂದ ದೇವಭಯವನ್ನು ಈ ರಂಜಾನ್ ಮಾಸದಲ್ಲಿ ತಿಳಿಸಿಕೊಡಲಾಗುತ್ತದೆ.ಜಗತ್ತಿನಲ್ಲಿ ಶಾಂತಿ ಸೌಹಾರ್ದತೆ ಬೆಳೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಳಿಕೋಟಿಯ ಮುಸ್ಲಿಂ ಧರ್ಮಗುರು ಶಕೀಲಅಹ್ಮದ ಖಾಜಿ,ಮೌಲಾನಾಗಳು ಇದ್ದರು.ಪಟ್ಟಣದ ಸರ್ವಧರ್ಮೀಯರು ಇಫ್ತಿಯಾರ್ ಕೂಟದಲ್ಲಿ ಭಾಗಿಯಾಗಿದ್ದರು.

 

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು