32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ ಕ್ಯಾಮೆರಾಗಳು ಜೂ.27 ರಂದೇ ಬಂದ್ ಆಗಿದ್ದು ಅವುಗಳನ್ನು ದುರಸ್ತಿ ಮಾಡಿಸಿರಲಿಲ್ಲ.ಇದನ್ನು ಸಾಧಿಸಿ ಕಳ್ಳರು ದೇವರ ಮೂರ್ತಿ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.ನಮಗೆ ಯಾರ ಮೇಲೂ ಸಂಶಯವಿಲ್ಲ.ಆದರೆ ಹೊರಗಿನಿಂದ ಬಂದವರೇ ದೇವಸ್ಥಾನದ ಮಾಹಿತಿ ತಿಳಿದುಕೊಂಡು ವಿಗ್ರಹ ಕಳ್ಳತನ ಮಾಡಿಕೊಂಡು ಹೋಗಿರುವ ಸಂಶಯ ಇದೆ ನಮಗಿದೆ ಎಂದು ದೇವಸ್ಥಾನ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನ ಕಮೀಟಿ ಸದಸ್ಯ ಶ್ರೀಶೈಲ ಮೇಟಿ, ಹಾಲಿ,ಮಾಜಿ ಶಾಸಕರು ಘಟನೆಯ ಕುರಿತು ಕಟ್ಟುನಿಟ್ಟಾಗಿ ತನಿಖೆ ನಡೆಸಿ ತ್ವರಿತವಾಗಿ ಕಳ್ಳರನ್ನು ಬಂಧಿಸಲು ಸೂಚನೆ ನೀಡಿದ್ದು ಪೊಲೀಸ ಇಲಾಖೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.ಆದಷ್ಟು ಶೀಘ್ರ ಕಳ್ಳರು ಪತ್ತೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.ಸದಸ್ಯರಾದ ಎಸ್.ಬಿ.ನಾಡಗೌಡ್ರ,ಎಸ್.ಎಸ್.ಹಂಡರಗಲ್ ಇದ್ದರು.ಘಟನೆಯ ಕುರಿತಂತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ ಪ್ರಧಾನಿ ಸಮ್ಮುಖದಲ್ಲಿ ಮೂರ್ತಿ ಪ್ರತಿಷ್ಠಾಪನೆ: ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಕಳೆದ 2016-17ರಲ್ಲಿ ಈಗಿನ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ದೇವಸ್ಥಾನಕ್ಕೆ ಹೊತ್ತಿದ್ದ ಹರಕೆಯಂತೆ 55 ಕೆಜಿ ಬೆಳ್ಳಿಯನ್ನು ದೇಣಿಗೆಯಾಗಿ ಕೊಟ್ಟಿದ್ದರು.ಅದರಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಬಸವೇಶ್ವರ ವಿಗ್ರಹವನ್ನು 32ಕೆಜಿ ತೂಕದಲ್ಲಿ ತಯಾರಿಸಿದ್ದರು.ಇನ್ನೊಂದು ಶರಣ ಬಸವೇಶ್ವರರ ಮೂರ್ತಿಯನ್ನು 20 ಕೆಜಿ ತೂಕದಲ್ಲಿ ಮಾಡಿಸಲಾಗಿತ್ತು.ದೇವರಹಿಪ್ಪರಗಿ ಶಾಸಕರಾಗಿದ್ದ ಎ.ಎಸ್.ಪಾಟೀಲ ನಡಹಳ್ಳಿ ಅವರು ಮಾಜಿ ಪ್ರಧಾನ ಎಚ್.ಡಿ.ದೇವೇಗೌಡ,ಅಂದಿನ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರೆಯಿಸಿ ಈ ಮೂರ್ತಿಗಳನ್ನು ಭವ್ಯ ಮೆರವಣಿಗೆ ನಡೆಸಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿ ಪೂಜಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು.ಇಂದು ದೇವಸ್ಥಾನದ ಕೀಲಿ ಮುರಿದು ಪ್ರಧಾನ ವಿಗ್ರಹವನ್ನೇ ಕಳ್ಳರು ಹೊತ್ತೊಯ್ದಿದ್ದಾರೆ. ಪೊಲೀಸರು,ಶ್ವಾನದಳ,ಬೆರಳಚ್ಚು ತಂಡ ಭೇಟಿ: ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನದ ಸುದ್ದಿ ಕಾಳ್ಗಿಚ್ಚಿನಿಂತೆ ಹರಡುತ್ತಿದ್ದಂತೆ ಡಿವೈಎಸ್ಪಿ ಚಂದ್ರಕಾoತ ನಂದರೆಡ್ಡಿ,ಸಿಪಿಐ ಮೊಹ್ಮದ ಫಸಿವುದ್ದೀನ್,ಪಿಎಸ್‌ಐ ಸಂಜಯ ತಿಪರೆಡ್ಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.ಅಲ್ಲದೇ ವಿಜಯಪುರದಿಂದ ಶ್ವಾನದಳ,ಬೆರಳಚ್ಚು ತಜ್ಞರ ತಂಡದವರು ಆಗಮಿಸಿ ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ.ಪ್ರಕರಣದ ತನಿಖೆ ನಡೆದಿದೆ.ಸದ್ಯಕ್ಕೆ ಏನೂ ಹೇಳಲಾಗುವುದಿಲ್ಲ.ಆದಷ್ಟು ಬೇಗ ಕಳ್ಳರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಾಸಕ ಸಿ.ಎಸ್.ನಾಡಗೌಡ ಭೇಟಿ: ಘಟನೆ ವಿಷಯ ತಿಳಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಆಡಳಿತ ಮಂಡಳಿಯವರಿoದ ಘಟನೆ ಮಾಹಿತಿ ತಿಳಿದುಕೊಂಡರು.ಅಲ್ಲದೇ ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ ಅವರಿಗೆ ಆದಷ್ಟು ಬೇಗ ಕಳ್ಳರನ್ನು ಬಂಧಿಸುವoತೆ ಸೂಚನೆ ನೀಡಿದರು.

ಮೂರ್ತಿ ಕಳವು; ಭಕ್ತೆ ಕಣ್ಣೀರು: ಪವಾಡ ಬಸವೇಶ್ವರ ಮೂರ್ತಿ ಕಳುವು ಆಗಿದೆ ಎಂಬ ಸುದ್ದಿ ತಿಳಿದ ತಕ್ಷಣ ಸಾವಿರಾರು ಭಕ್ತರು ದೇವಸ್ಥಾನದತ್ತ ಆಗಮಿಸಿ ಘಟನೆಯ ಕುರಿತು ಆತಂಕ,ದಿಗ್ಭçಮೆ ವ್ಯಕ್ತಪಡಿಸಿದರು.ಈ ವೇಳೆ ಭಕ್ತೆಯೊಬ್ಬಳು, ದೇವಸ್ಥಾನದ ಆವರಣದಲ್ಲಿಯೇ ಪವಾಡ ಮುತ್ಯಾ ಎಲ್ಲಿಗೆ ಹೋದ್ಯೋ ಎಪ್ಪಾ , ನಮ್ಮಪ್ಪನ್ನ ಕರಕೊಂಡು ಹುಡಕಾಡಿಕೊಂಡು ರ‍್ರೊö್ಯÃ ಎಂದು ಕಣ್ಣೀರು ಹಾಕಿದ ದೃಶ್ಯ ಭಕ್ತರ ಮನಕಲುಕಿತು.ದೇವಸ್ಥಾನದಲ್ಲಿ ಮೂರ್ತಿ ಇಲ್ಲದ ಕಾರಣ ಪಾದಗಟ್ಟೆಗೆ ಭಕ್ತರು ನಮಸ್ಕರಿಸಿ ಹೋಗುತ್ತಿದ್ದ ದೃಶ್ಯ ಕಂಡು ಬಂದಿತು.

ಮಾಜಿ ಶಾಸಕ ನಡಹಳ್ಳಿ ದಿಗ್ಭçಮೆ: ಪವಾಡ ಬಸವೇಶ್ವರ ದೇವರ ವಿಗ್ರಹ ಕಳ್ಳತನವಾಗಿರುವುದು ನನಗೆ ದಿಗ್ಘçಮೆ ಮೂಡಿಸಿದ್ದು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ.ಆದಷ್ಟು ಬೇಗ ಕಳ್ಳರನ್ನು ಬಂಧಿಸಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದ್ದೇನೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ