ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ ಬಗ್ಗೆ ಮಾತನಾಡಲು ನಾವೆಲ್ಲ ಬಹಳ ಸಣ್ಣವರು.ಈ ವಿಷಯದ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರೇ ಹೇಳಿಕೆ ಕೊಟ್ಟಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ಸುಗಮವಾಗಿ ,ಸರಳವಾಗಿ ಸರಕಾರ ನಡೆದಿದೆ.ಮಂತ್ರಿ ಮಂಡಲದ ಬದಲಾವಣೆ ಆಗುವುದು ಸಹಜ.ಕೆಲವರು ಬದಲಾಗುತ್ತಾರೆ.ಹೋದ ಸಲ ನನ್ನ ಹೆಸರು ಲೀಸ್ಟ್ನಲ್ಲಿ ಹೆಸರಿತ್ತು.ಕೊನೆಯ ಕ್ಷಣದಲ್ಲಿ ಕೈ ಬಿಟ್ಟರು.ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದು ಅವರಲ್ಲಿ ಯಾರಾದರೂ ಸಚಿವ ಸ್ಥಾನ ತ್ಯಾಗ ಮಾಡಿದರೆ ಆ ಸ್ಥಾನಕ್ಕೆ ಹಿರಿಯನಾದ ನನ್ನನ್ನು ಪರಿಗಣಿಸಬೇಕು ಎಂದು ಹೈಕಮಾಂಡ್‌ಗೆ ವಿನಂತಿಸಿದ್ದೇನೆ.ಹೈಕಮಾಂಡ್ ಯಾರಿಗೆ ಸೂಚನೆ ಕೊಡುತ್ತದೆಯೋ ಅದರಂತೆ ನಡೆಯುತ್ತೇವೆ.ನಾನು ಯಾರಿಗೂ ಸ್ಥಾನ ತ್ಯಾಗ ಮಾಡಲು ಹೇಳುವುದಿಲ್ಲ.ಅಲ್ಲದೇ ಅಷ್ಟು ದೊಡ್ಡವನು ನಾನಲ್ಲ ಎಂದು ತಿಳಿಸಿದ ನಾಡಗೌಡ, ಈ ಬಾರಿ ನನ್ನನ್ನು ಮಂತ್ರಿ ಮಾಡುವ ಆಶ್ವಾಸನೆಯನ್ನು ಹೈಕಮಾಂಡ್‌ನಿoದ ಸಿಕ್ಕಿದೆ.ಸಂಪುಟದಲ್ಲಿ ಇರುವ ವಿಶ್ವಾಸ ಇದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಉದ್ಯಮಿ ಶರಣು ಸಜ್ಜನ,ಸಿಕಂದರ ಜಾನ್ವೆಕರ,ರಾಜು ರಾಯಗೊಂಡ,ಶಿವು ಶಿವಪೂರ, ರಾಜು ಗೌಡರ,ರಾಯನಗೌಡ ತಾತರೆಡ್ಡಿ ಇದ್ದರು.

ನನಗೆ ನೋವಾಗಿದೆ’:

ಈ ಸಲದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಮುದ್ದೇಬಿಹಾಳದಿಂದ ಹಿರಿಯ ಸಾಹಿತಿ ಬಿ.ಎಂ.ಹಿರೇಮಠ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದೇವು.ಆದರೆ ಅದಕ್ಕೆ ಸಂಬoಧಿಸಿದ ಇಲಾಖೆಯಿಂದ ಸ್ಪಂದನೆ ದೊರೆಯಲಿಲ್ಲ.ಅಲ್ಲದೇ ಕೆಲವು ನಿಗಮ ಮಂಡಳಿಗಳಿಗೆ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವಂತೆ ಪತ್ರ ಬರೆದಿದ್ದರೂ ಅದಕ್ಕೂ ಈವರೆಗೆ ಯಾವುದೇ ಉತ್ತರ ಬಂದಿಲ್ಲ.ಇದರಿoದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಶಾಸಕ ನಾಡಗೌಡ ತಿಳಿಸಿದರು.ಹೈಕಮಾಂಡ್ ಹೇಳಿದರೆ ಇವತ್ತೇ ನನ್ನ ನಿಗಮದ ಅಧ್ಯಕ್ಷಗಿರಿಗೆ ರಾಜೀನಾಮೆ ನೀಡುವೆ ಎಂದೂ ತಿಳಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ