Astrology Image of astrology

ದಿನ ಭವಿಷ್ಯ: ಗಣ್ಯರೊಂದಿಗೆ ಈ ರಾಶಿಯವರ ವ್ಯವಹಾರಿಕ ಬಾಂಧವ್ಯ ವೃದ್ಧಿ

ದಿನ ಭವಿಷ್ಯ: ಗಣ್ಯರೊಂದಿಗೆ ಈ ರಾಶಿಯವರ ವ್ಯವಹಾರಿಕ ಬಾಂಧವ್ಯ ವೃದ್ಧಿ

ಮೇಷ ರಾಶಿ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು.ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರು ವುದು.ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.
ಆರ್ಥಿಕ ಸಂಕಷ್ಟ ದೂರಾಗುವುದು.(ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸು ವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸ ವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.(ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯು ವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗ ಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ.ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ.(ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ :ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯ ಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡ.(ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮ್ಮ ಇಷ್ಟಾರ್ಥಗಳು ಈಡೇರಬಹುದು. ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹು ದು.ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾ ಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾ ಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನ ಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕ ಗಳನ್ನು ಒದಗಿಸುತ್ತವೆ.(ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಗಣ್ಯರೊಂದಿಗೆ ವ್ಯವ ಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ : ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ.ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರ ಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಭ್ರಮಗಳ ವಾತಾವರಣ ಮೂಡ ಲಿದೆ. ಶುಭ ಕಾರ್ಯ ಪ್ರಯತ್ನ ಫಲ ಕೊಡುವ ಯೋಗವಿದೆ.(ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ :ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ.ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಗಾಗದಿರಿ.ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸ ಲು ಸಿದ್ಥರಾಗಿರಿ.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ನವಮಿ
ನಕ್ಷತ್ರ : ಪುನರ್ವಸು ನಕ್ಷತ್ರ.

ರಾಹುಕಾಲ:01:30PM ರಿಂದ 3:00PM
ಗುಳಿಕಕಾಲ:09:00AM ರಿಂದ 10:30AM
ಯಮಗಂಡಕಾಲ:06:00AM ರಿಂದ 07:30AM

Latest News

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು ಜನಿಸಿದ ಗ್ರಾಮ ಅಭಿವೃದ್ಧಿಯಾಗಬೇಕು ಎಂಬ ಕಳಕಳಿಯಿಂದ ರೂ.25 ಲಕ್ಷ ಸ್ವಂತ ಹಣದಲ್ಲಿ ಸಿಸಿ ರಸ್ತೆ ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಪ್ರಭು ಭೈರಿಯವರು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಮುಖಂಡ ಅಶೋಕ ಭೋವಿ ಹೇಳಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತೆ ಮಾರಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಆವರಣದಲ್ಲಿ