ನವಜೀವನೋತ್ಸವ ಕಾರ್ಯಕ್ರಮ: ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ನವಜೀವನೋತ್ಸವ ಕಾರ್ಯಕ್ರಮ: ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ಮುದ್ದೇಬಿಹಾಳ : ಯಾವುದೋ ಕಾರಣದಿಂದಾಗ ಕುಡಿತದ ದಾಸರಾಗಿದ್ದುಕೊಂಡು ಮನ,ಮನೆಯ ಸ್ಥಿತಿಯನ್ನು ಹಾಳುಮಾಡಿಕೊಂಡಿದ್ದವರು ಮದ್ಯವರ್ಜನ ಶಿಬಿರದ ಮೂಲಕ ಸುಧಾರಣೆ ಕಂಡಿದ್ದೀರಿ.ಇದೀಗ ನವಜೀವನ ಸಮೀತಿಯ ಸದಸ್ಯರಾಗಿದ್ದೀರಿ.ಪಾನಮುಕ್ತರು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮುಖ್ಯಸ್ಥರಾದ ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಮಾಣ ಪತ್ರಗಳನ್ನು ನಿಮಗೆ ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮೋಹನ್ ನಾಯ್ಕ ಹೇಳಿದರು.

ಪಟ್ಟಣದ ವಿದ್ಯಾನಗರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮತ್ತೆ ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು. ಸಮಾಜಮುಖಿ ಕೆಲಸ ಮಾಡಲು ಪೂಜ್ಯರಿಗೆ ಮತ್ತಷ್ಟು ಶಕ್ತಿ ಬರುತ್ತದೆ ಎಂದು ಹೇಳಿದರು.

ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಶ್ರೀಶೈಲ್ ದೊಡಮನಿ ಮಾತನಾಡಿ, ನವಜೀವನ ಸಮಿತಿ ಸದಸ್ಯರು ಹೊಸ ಜೀವನ ಆರಂಭಿಸಿದ್ದು ಅವರ ಭವಿಷ್ಯದ ಜೀವನ ಉಜ್ವಲವಾಗಲಿ ಎಂದರು.

ಜನಜಾಗೃತಿ ವೇದಿಕೆ ಸದಸ್ಯ ಡಾ.ವೀರೇಶ ಪಾಟೀಲ ಮಾತನಾಡಿ, ಮುಂದಿನ ಜೀವನದಲ್ಲಿ ಕುಡಿತಕ್ಕೆ ಒಳಗಾಗದೆ ಒಳ್ಳೆಯ ದಾರಿಯಲ್ಲಿ ಸಮಾಜಕ್ಕೆ ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಜೀವನ ಮಾಡಬೇಕೆಂದು ಹೇಳಿದರು.

ಕಲಬುರ್ಗಿ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ರಾಜೇಶ ಕೆ ಮಾತನಾಡಿ, ಕುಡಿತ ಬಿಟ್ಟ ನಂತರ ಕ್ಷೇತ್ರ ಧರ್ಮಸ್ಥಳದಿಂದ ಬರುವಂತಹ ಹಲವು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ ಪಾನಮುಕ್ತರಾಗಿರುವ ಜೀವನದ ಕಥೆ ಇನ್ನೊಬ್ಬರಿಗೆ ಮಾರ್ಗದರ್ಶನ ಮಾಡುವಂತೆ ಸಾಧನೆ ಮಾಡಲು ಹೇಳಿದರು.

ತಾಲ್ಲೂಕು ಯೋಜನಾಧಿಕಾರಿ ಶಿವಾನಂದ ಪಿ.,ನಾಗೇಶ ಎಸ್.ಕೆ.,ನಿಂಗನಗೌಡ ಪಾಟೀಲ್ ಸೇವಾಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು ಇದ್ದರು.ಮಲ್ಲೇಶ ಕೆ.,ಸ್ವಾಗತಿಸಿದರು.ನಿಂಗನಗೌಡ ಪಾಟೀಲ್ ನಿರೂಪಿಸಿದರು.ನಾಗೇಶ್ ಎಸ್.ಕೆ ವಂದಿಸಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,