To what extent are we Lingayats practicing religion: MLA Vijayananda Kashappan's question

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಹುನಗುಂದ: ಲಿಂಗಾಯತರಾದ ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಗುರುಗಳಿಂದ ಮಾತ್ರ ಧರ್ಮ ಉಳಿಸಲು ಸಾಧ್ಯವಿಲ್ಲ ಭಕ್ತರು ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ವಿಜಯಾನಂದ ಕಾಶಪ್ಪನವರ
ಹೇಳಿದರು.

ಇನ್ನಷ್ಟು‌ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಬಸವ ಮಂಟಪದಲ್ಲಿ ಸೋಮವಾರ ಸಂಜೆ ನಡೆದ ಶ್ರಾವಣ ಮಾಸದ ವಚನ ದರ್ಶನ ಪ್ರವಚನ ಮಂಗಲ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ನಡೆದು ಬಂದ ಪಾರಂಪರಿಕ ವಿಚಾರಧಾರೆಗಳನ್ನು ಪ್ರತಿಯೊಬ್ಬರು ತಿಳಿದು. ಲಿಂಗಾಯತರು ಸಂಸ್ಕಾರ, ಸಂಸ್ಕೃತಿ ಜೊತಗೆ ಮಾನವೀಯತೆ ಕಲಿಸಿದ ಧರ್ಮ ಪಾಲನೆ ಮಾಡುವುದು ನಮ್ಮಲ್ಲರ ಕರ್ತವ್ಯವಾಗಿದೆ. ಇಂದಿನ ದಿನಗಳಲ್ಲಿ ಧರ್ಮ ಪಾಲನೆಯನ್ನು ಮಾಡುವುದನ್ನು ಲಿಂಗಾಯತರು ಮರೆತಿದ್ದಾರೆ. ಆದ್ದರಿಂದ ನಮ್ಮ ಮಕ್ಕಳಿಗೆ ಮತ್ತು ಮೊಮ್ಮಕಳಿಗೆ ಧರ್ಮ ಪಾಲನೆಯನ್ನು ಕಡ್ಡಾಯವಾಗಿ ಮಾಡಿದರೆ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ತಿಳಿಸಿದರು.

ಚಿತ್ತರಗಿ ಸಂಸ್ಥಾನದ ಇಳಕಲ್‌ದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಲಿಂಗಾಯತ ಮಠ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಬದುಕು ಕಟ್ಟಿಕೊಂಡವರು ಸಹ ಧಾರ್ಮಿಕ ಅಂಧ ಶ್ರದ್ಧೆ ಪ್ರದರ್ಶಿಸುತ್ತಿರುವುದು ವಿಪರ್ಯಾಸ. ಲಿಂಗಾಯತರು ಲಿಂಗಾಯತ ಧರ್ಮದಿಂದ ವಿಮುಖರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿರೂರಿನ ವಿಜಯ ಮಹಾಂತ ತೀರ್ಥದ ಬಸವಲಿಂಗ ಸ್ವಾಮೀಜಿ ಮಾತನಾಡಿ ಪ್ರತಿಯೊಬ್ಬರು ವಚನಗಳನ್ನು ಭಕ್ತಿಯಿಂದ ಓದಬೇಕು. ಲಿಂಗ ಪೂಜೆಯನ್ನು ಮಾಡಬೇಕು. ಹಣೆಯಲ್ಲಿ ವಿಭೂತಿಯನ್ನು ಧರಿಸಬೇಕು. ಮಕ್ಕಳಿಗೆ ಲಿಂಗವನ್ನು ಕಟ್ಟಬೇಕು ಎಂದು ತಿಳಿಸಿದರು.

ಸಂತೆ ಕಡೂರಿನ ನವಲಿಂಗ ಸ್ವಾಮೀಜಿ ಜನವಾಡದ ಅಲ್ಲಮಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ, ವಿಜಯಪುರ ಜ್ಞಾನ ಯೋಗಾಶ್ರಮದ ಪ್ರವಚನಕಾರ ಸಂಗಮೇಶ್ವರ ಸ್ವಾಮೀಜಿ ಮಾತನಾಡಿದರು.

ಎಸ್.ಎನ್.ಹಾದಿಮನಿ ಮತ್ತು ಭುವನೇಶ್ವರಿ ಮೆಣಸಿನಕಾಯಿ ಪ್ರವಚನ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಲಿಂಗಸೂರನ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ವಿರಕ್ತಮಠದ ವಿರತಿಶಾನಂದ ಸ್ವಾಮೀಜಿ, ಡಾವಣಗೇರಿಯ ಬಸವಚೇತನ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷ ರಾಜವ್ವ ಬದಾಮಿ, ಉಪಸ್ಥಿತರಿದ್ದರು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ