Astrology Image of astrology

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಸಂಕಷ್ಟ ಕಟ್ಟಿಟ್ಟ ಬುತ್ತಿ

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಸಂಕಷ್ಟ ಕಟ್ಟಿಟ್ಟ ಬುತ್ತಿ

ಮೇಷ ರಾಶಿ: ಮನೆ ದೇವರ ದರ್ಶನ ಪಡೆಯುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.ಹಣಕಾಸಿನ ವಿಷಯಗಳಿಗೆ ಹೆಚ್ಚು ಗಮನ ನೀಡುತ್ತಿದ್ದೀರಿ,ಆದರೆ ಆಸ್ತಿಯೇ ಎಲ್ಲವೂ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕಿದೆ. ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯವಿರುತ್ತದೆ.ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಕನಸು ಈಡೇರಿಕೆಯ ಸಮಯವಿದು. ಆದರೆ, ಇದಕ್ಕೆ ನಿಮ್ಮ ಪರಿಶ್ರಮದ ಅಗತ್ಯವಿದೆ. ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ತಪ್ಪು ಮಾಡುತ್ತಿರುವ ಮನೋಭಾವ ನಿಮ್ಮಲ್ಲಿದೆ. ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇರಲಿ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಉತ್ತಮ ದಿನ. ಉತ್ತಮ ಸಾಮಾಜಿಕ ಸಂಪರ್ಕ ಬೆಳೆಸಿಕೊಳ್ಳಿ. ಉದ್ವೇಗಕ್ಕೊಳಗಾಗದಿರಿ.ಅತಿಯಾದ ನಿರೀಕ್ಷೆಗಳು ಬೇಡ.ಇದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು.
ಇಲ್ಲಿಯವರೆಗೆ ಅನವಶ್ಯಕವಾಗಿ
ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ
ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟಎಂಬುದು ಅರ್ಥವಾಗುತ್ತದೆ.
(ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ: ರಾಜಿ ವಿಚಾರದಲ್ಲಿ ಕಷ್ಟಗಳನ್ನು ಎದುರಿಸಲಿದ್ದೀರಿ. ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ. ಎಚ್ಚರಿಕೆವಹಿಸಿ.( ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ಶುಕ್ರನ ಪ್ರಭಾವ ನಿಮ್ಮ ರಾಶಿ ಮೇಲಿದೆ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ.
ಬೇಸರ ಬೇಡ. ಮುನ್ನಡೆಯಿರಿ.
(ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಮನೆಯಲ್ಲಿ ಪ್ರೀತಿ ಮತ್ತು ತಿಳುವಳಿಕೆಯನ್ನು ಕಾಣುವಿರಿ.ನೀವು ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮಾತುಗಳನ್ನು ವಿವರಿಸಲು ನಿಮಗೆ ಸ್ವಲ್ಪ ಕಷ್ಟ ವಾಗಬಹುದು.(ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಕುಟುಂಬದ ಸದಸ್ಯರ ಉತ್ತಮ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಭಾವನಾತ್ಮಕ ಮಹತ್ವಾಕಾಂಕ್ಷೆಗಳನ್ನು ಈಡೇರುವ ಸಮಯವಿದು. ಆದರೆ, ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸ ಬೇಕಾಗುತ್ತದೆ.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕುಟುಂಬದ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನೀವು ಏನನ್ನಾದರೂ ಮಾಡಬೇಕು.ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು. ವೈಯಕ್ತಿಕ ಸಂಬಂಧಗಳು ಸೂಕ್ಷ್ಮ ಮತ್ತು ದುರ್ಬಲವಾಗಿರುತ್ತವೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮೂಲಭೂತ ಅಂಶಗಳನ್ನು ಉತ್ತಮವಾಗಿ ನಿಭಾಯಿಸಿದರೆ ನಿಮ್ಮ ಯೋಜನೆ ಗಳು ಉತ್ತಮವಾಗಿರುತ್ತವೆ. ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿ ರುತ್ತದೆ.(ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನಿಮ್ಮ ಆರೋಗ್ಯ ದ ಬಗ್ಗೆ ಕಾಳಜಿ ವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹ ಗಳಿಂದ ದೂರವಿರಿ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ದಶಮಿ
ನಕ್ಷತ್ರ : ಪುಷ್ಯ ನಕ್ಷತ್ರ.

ರಾಹುಕಾಲ:10:30AM ರಿಂದ 12:00PM
ಗುಳಿಕಕಾಲ:07:30AM ರಿಂದ 09:00AM
ಯಮಗಂಡಕಾಲ:03:00PM ರಿಂದ 04:30PM

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ