Astrology Image of astrology

ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಮೇಷ ರಾಶಿ: ನಿಮ್ಮ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ.ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು).

ವೃಷಭ ರಾಶಿ: ಇಂದು ಕೆಲವು ಸವಾಲುಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿದ್ದರೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದ ರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು.ಕಚೇರಿಯಲ್ಲಿ ಹೊಸ ತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು.ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ .
(ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ಸಿಂಹ ರಾಶಿ: ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬಹುದು.ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವುದು.ನವಗ್ರಹ ಸ್ತೋತ್ರ ಪಠಿಸಿರಿ .(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು).

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ .ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗು ವರು.ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜನರಿಂದ ಕಾಪಾಡುವುದು ಉತ್ತಮ. ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ .(ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ .ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಧನಸ್ಸು ರಾಶಿ:ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆ ಯು ಗೌರವ ಆದರಗಳನ್ನು ತಂದು ಕೊಡುವುದು.ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ಮಕರ ರಾಶಿ:ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣ ವಾಗುವುದು .ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು).

ಕುಂಭ ರಾಶಿ:ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ.ಪ್ರಶಂಸೆಗಳ ಸುರಿಮಳೆ ಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ಮೀನ ರಾಶಿ: ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸು ವಿರಿ.ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು.ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ.
ಆರ್ಥಿಕ ಸ್ಥಿತಿ ಉತ್ತಮವಾಗಿರುವುದು .(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ತಿಥಿ : ಚತುರ್ಥಿ
ನಕ್ಷತ್ರ : ಚಿತ್ತ ನಕ್ಷತ್ರ. ‌

ವಿನಾಯಕ ಕೂರಿಸಲು ಒಳ್ಳೆಯ ಸಮಯ :
05:00AM ರಿಂದ 07:00AM
08:00AM ರಿಂದ 09:00AM
10:30AM ರಿಂದ 12:00PM
04:00PM ರಿಂದ 5:30PM

ಈ ದಿನ ಸಂಜೆ ಚಂದ್ರನನ್ನು ನೋಡಬಾರದು.

ರಾಹುಕಾಲ:09:00AM ರಿಂದ 10:30AM
ಗುಳಿಕಕಾಲ:06:00AM ರಿಂದ 07:30AM
ಯಮಗಂಡಕಾಲ:01:30PM ರಿಂದ 03:00PM

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ