ಬಾಗಲಕೋಟೆ: ನಾಗರಪಂಚಮಿ ಹಬ್ಬದ ಆ.9ರ ಶುಕ್ರವಾರ ಮುಂಜಾನೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ.
Join Telegram: https://t.me/dcgkannada
ತಾಲೂಕಿನ ನಂದಗಾಂವ ಗ್ರಾಮದ ನಿವಾಸಿಗಳಾದ ಸಚಿನ್ ಭೀಮಪ್ಪ ದಳವಾಯಿ(22), ಪ್ರಿಯಾ ಮಲ್ಲಪ್ಪ ಮಡಿವಾಳ (19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ಎಂದು ಗುರುತಿಸಲಾಗಿದೆ.
ಸಚಿನ್ ಮತ್ತು ಪ್ರಿಯಾ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ಮದುವೆಗೆ ಮನೆಯವರು ನಿರಾಕರಿಸಿದ್ದಕ್ಕೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಇದನ್ನೂ ಓದಿ: Mudhol: ಸ್ವಾತಂತ್ರ್ಯ ಹೋರಾಟಗಾರ ಜಡಗಣ್ಣ-ಬಾಲಣ್ಣ ಮೂರ್ತಿ ಪ್ರತಿಷ್ಠಾಪನೆ
ಘಟನೆಯ ಸಂಬಂಧ ಮಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಮತ್ತೇನಾದರೂ ಕಾರಣ ಇದೆಯೇ ಎಂಬುದನ್ನು ತನಿಖೆ ನಡೆಸುವುದಾಗಿ ಮಾಲಿಂಗಪುರ ಪೊಲೀಸರು ಮಾಹಿತಿ ನೀಡಿದ್ದಾರೆ.