Training for Competitive Examination: Dharwad Model Training Begins

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ರೈತರೇ ಕೊಬ್ಬಿದ ದನಗಳನ್ನು ಪಳಗಿಸಿ ಕೃಷಿ ಚಟುವಟಿಕೆಗೆ ಬಳಸುತ್ತಾರೆ. ಇನ್ನು ಕಲಿತವರನ್ನು ಸುಧಾರಿಸುವ ಕಾರ್ಯ ಶಿಕ್ಷಕರಿಂದ ಏಕೆ ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಚ್.ಬಿ.ವಾಲೀಕಾರ ಹೇಳಿದರು.

ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ ಪದವಿಗಳ ಕುರಿತ ಎರಡು ದಿನದ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿಗ್ರಿಗಳೆಂದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪತ್ರದಂತಿದ್ದು ನಾವೆಲ್ಲ ಶಿಕ್ಷಕರ ಬೆನ್ನು ಚಪ್ಪರಿಸುವ ಕೆಲಸ ಮಾಡಬೇಕು. ಮುದ್ದೇಬಿಹಾಳದ ಅಭ್ಯುದಯ ಪದವಿ ಕಾಲೇಜಿನಲ್ಲಿ ಧಾರವಾಡದಲ್ಲಿ ನೀಡುವ ಸ್ಪರ್ಧಾತ್ಮಕ ತರಬೇತಿ ಕೇಂದ್ರದಿಂದ ನೀಡಲಾಗುವ ತರಬೇತಿಯನ್ನು ಹೈಬ್ರಿಡ್ ಕ್ಲಾಸ್ ರೂಂ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಅಭ್ಯುದಯ ಪದವಿ ಕಾಲೇಜಿನ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು ಮಾಡಿರುವ ಮಾಜಿ ಕುಲಪತಿಗಳಾದ ಎಚ್.ಬಿ.ವಾಲೀಕಾರ ಅವರ ಮಾರ್ಗದರ್ಶನದಲ್ಲಿ ಐಎಎಸ್, ಕೆಎಎಸ್, ಪಿಎಸ್‌ಐ, ಪಿಡಿಒ ಮತ್ತಿತರರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಧಾರವಾಡ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಿದ್ದಣ್ಣ ದಳವಾಯಿ ಉಪನ್ಯಾಸ ನೀಡಿ, ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದು 80 ಸಾವಿರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇನ್ನುಳಿದ ಹುದ್ದೆಗಳ ನೇಮಕಕ್ಕೆ ಸದ್ಯಕ್ಕೆ ರಾಜ್ಯ ಸರ್ಕಾರದಿಂದ ತಡೆ ನೀಡಿದ್ದು ನ್ಯಾ. ನಾಗಮೋಹನದಾಸ್ ವರದಿ ಬಳಿಕ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದ್ದಾರೆ. ಎಲ್ಲರಿಗೂ ಸರ್ಕಾರಿ ಹುದ್ದೆ ದೊರೆಯುವುದಿಲ್ಲ.
ಆದರೆ ಪರಿಶ್ರಮದಿಂದ ಪ್ರಯತ್ನಿಸಿದವರಿಗೆ ಸರ್ಕಾರಿ ಹುದ್ದೆ ದೊರೆಯುವುದು ಕಷ್ಟವೇನಲ್ಲ. ಮುಂಬರುವ ದಿನಗಳಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರ್ವ ಆರಂಭವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಆರ್. ಎಸ್. ಜಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಂ. ಎಂ. ಧನ್ನೂರ, ಧಾರವಾಡ ಎಂ. ಡಿ. ಆರ್. ಎಸ್‌ನ ಶೇಖಪ್ಪ ಮೇಟಿ ಇದ್ದರು. ಬಿ. ಜಿ. ಬಿರಾದಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿದ ಶರಣಬಸ್ಸು ವಣಕಿಹಾಳ, ಐಶ್ವರ್ಯಾ ಪೂಜಾರಿ,ವಾಣಿಜ್ಯ ವಿಭಾಗದಲ್ಲಿ ಕಾವ್ಯಶ್ರೀ ಬಿರಾದಾರ, ಬಿ.ಎಸ್ಸಿ ಅಗ್ರಿ ಸೀಟು ಪಡೆದುಕೊಂಡ ಮಾಣಿಕ್ಯ ಲಮಾಣಿ, ರತಿಕಾಂತ ಆಕಳವಾಡಿ, ನೀಟ್ ಪರೀಕ್ಷೆಯಲ್ಲಿ 627ನೇ ರ‍್ಯಾಂಕ್ ಪಡೆದ ಮಹಾದೇವಿ ಢವಳಗಿ ಅವರನ್ನು ಸನ್ಮಾನಿಸಲಾಯಿತು.

ಈ ಭಾಗದಲ್ಲಿ ಮಾತೋಶ್ರೀ ಗಂಗಮ್ಮ ಚಿನಿವಾರ ಅವರು ಶಿಕ್ಷಣಕ್ಕೆ ಜಮೀನು ದಾನ ಮಾಡಿದ್ದರಿಂದಲೇ ನಮ್ಮಂತಹ ಸಾವಿರಾರು ಜನ ಉನ್ನತ ಹುದ್ದೆಗಳಲ್ಲಿ ಏರುವಂತಾಯಿತು. ಚಿನಿವಾರ ಗಂಗಮ್ಮನವರು ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಿದ್ದಾರೆ. ಅದರಂತೆ ಈಗ ಮಲ್ಲಿಕಾರ್ಜುನ ಮದರಿ ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ತೋರುತ್ತಿರುವುದು ಈ ಭಾಗದ ಬಡವರಿಗೆ ಬೆಳಕಾಗಿದೆ.
–ಎಚ್.ಬಿ.ವಾಲೀಕಾರ, ಕವಿವಿ ಮಾಜಿ ಕುಲಪತಿ

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು