Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಕೊಪ್ಪಳ: ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra dam) 19ನೇ ಗೇಟ್‌ನ ಚೈನ್‌ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ.

ಏತನ್ಮಧ್ಯೆ, ಬೆಂಗಳೂರು, ಚೆನ್ನೈ, ಹೈದರಾಬಾದಿನಿಂದ ತಜ್ಞರ ತಂಡ ಕ್ರೆಸ್ಟ್ ಗೇಟ್ ದುರಸ್ತಿ ಕಾರ್ಯಕ್ಕಾಗಿ ಜಲಾಶಯಕ್ಕೆ ಭೇಟಿ ನೀಡಲಿದೆ.

Join Our Telegram: https://t.me/dcgkannada

ಕೊಪ್ಪಳ ತಾಲೂಕಿನ ಮುನಿರಾಬಾದ್‌ನಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಜಲಾಶಯ (Tungabhadra dam) ನಿರ್ಮಾಣ ಮಾಡಲಾಗಿದೆ. ಶನಿವಾರ ಮಧ್ಯರಾತ್ರಿ ಜಲಾಶಯದ ಕ್ರೆಸ್ಟ್‌ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿದೆ. ಒಂದೇ ಗೇಟ್‌ ಮೇಲೆ ಒತ್ತಡ ಹೆಚ್ಚಾಗಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಗೇಟ್ ಮುರಿದ ಪರಿಣಾಮ ನೀರು ರಭಸವಾಗಿ ನುಗ್ಗುತ್ತಿದ್ದು, ಜಲಾಶಯದ ಹೊರ ಹರಿವು 70 ರಿಂದ 1 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿದೆ. ಪೂರ್ಣ ಭರ್ತಿಯಾಗಿರುವ ಜಲಾಶಯದ ಒಂದು ಕ್ರೆಸ್ಟ್‌ ಗೇಟ್‌ನ ಚೈನ್ ಲಿಂಕ್ ಮುರಿದಿದ್ದು, ತುಂಗಭದ್ರಾ ನದಿ ಪಾತ್ರದ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಸದ್ಯ, 105 ಟಿಎಂಸಿ ಸಾಮರ್ಥ್ಯದ ಜಲಾಶಯ (Tungabhadra dam) ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನು ನೋಡುವುದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ದುರಸ್ತಿಗೆ ಜಲಾಶಯದ ಅರ್ಧ ನೀರು ಖಾಲಿಯಾಗಬೇಕು:
ದುರಸ್ತಿ ಮಾಡಬೇಕಾದರೇ ಜಲಾಶಯದಲ್ಲಿನ 60 ಟಿಎಂಸಿ ನೀರು ಖಾಲಿ ಮಾಡಬೇಕಾಗುತ್ತದೆ. ಜಲಾಶಯದ ಮೂಲ ವಿನ್ಯಾಸದ ಪ್ರತಿ ತರಿಸಿಕೊಳ್ಳಲಾಗಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ತೀರ್ಮಾನಿಸಲಾಗುತ್ತದೆ. ನೀರಿನ ಹೊರ ಹರಿವಿನ ಪ್ರಮಾಣವನ್ನು 1 ರಿಂದ 2 ಲಕ್ಷ ಕ್ಯುಸೆಕ್‌ಗೆ ಏರಿಸಬೇಕು. ನೀರು ಕಡಿಮೆಯಾದ ಬಳಿಕ ತುಂಡಾದ ಚೈನ್‌ ಲಿಂಕ್‌ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3- 4 ದಿನವಾದರೂ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಪ್ಪಳ – ಹೊಸಪೇಟೆ ಗಡಿಭಾಗದಲ್ಲಿರುವ ಜಲಾಶಯದ ಕರ್ನಾಟಕದ ವಿವಿಧ ಜಿಲ್ಲೆಗಳು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಕ್ಕೆ ಜೀವನಾಡಿಯಾಗಿದೆ. ಮಲೆನಾಡು ಭಾಗದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ತುಂಗ ಮತ್ತು ಭದ್ರಾ ನದಿಗಳು ಮೈದುಂಬಿ ಹರಿದಿವೆ. ಆದ್ದರಿಂದ ಜಲಾಶಯ ಜುಲೈನಲ್ಲಿಯೇ ಸಂಪೂರ್ಣ ಭರ್ತಿಯಾಗಿದೆ.

ತುಂಗಭದ್ರಾ ಜಲಾಶಯದ (Tungabhadra dam) ಪೂರ್ಣ ಮಟ್ಟ 1633 ಅಡಿಗಳು. ಸದ್ಯದ ಮಾಹಿತಿಯಂತೆ ಜಲಾಶಯದಲ್ಲಿ 1632 ಅಡಿಗಳ ನೀರಿನ ಸಂಗ್ರಹವಿದೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 10 ಟಿಎಂಸಿ ಅಡಿ ನೀರಿದೆ. ಜಲಾಶಯಕ್ಕೆ ಒಳಹರಿವು 45,086 ಕ್ಯುಸೆಕ್ ಇದೆ.

ಸಿಎಂ, ಡಿಸಿಎಂಗೆ ಮಾಹಿತಿ:
ಜಲಾಶಯಕ್ಕೆ ಭಾನುವಾರ ಬೆಳಗಿನ ಜಾವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದಿರುವ ಕಾರಣ ಅನಿವಾರ್ಯವಾಗಿ ನೀರು ಹೊರಬಿಡಬೇಕಾಗಿದೆ. ಈ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ.

ಸದ್ಯದ ಮಟ್ಟಿಗೆ 60ರಿಂದ 65 ಟಿಎಂಸಿ ಅಡಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. ಕನಿಷ್ಠ 20 ಅಡಿ ನೀರು ಖಾಲಿಯಾದರೆ ಮಾತ್ರ ನಿಖರವಾಗಿ ಸಮಸ್ಯೆ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ’ ಎಂದು ತಿಳಿಸಿದರು.

ಆಣೆಕಟ್ಟು ನಿರ್ಮಿಸಿದ ವಿನ್ಯಾಸವನ್ನು ತರಿಸಿಕೊಳ್ಳಲಾಗಿದ್ದು, ನೀರಿನ ರಭಸ ಹೆಚ್ಚಿರುವ ಕಾರಣ ಕೆಳಗಡೆ ಇಳಿದು ಕೆಲಸಮಾಡಲು ಆಗುವುದಿಲ್ಲ. ಸದ್ಯಕ್ಕೆ ಒಂದು ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ನೀರು ಹೊರಬಿಡುವ ಪ್ರಮಾಣ 2.50 ಲಕ್ಷ ಕ್ಯುಸೆಕ್ ದಾಟಿದರೆ ಮಾತ್ರ ಜನರಿಗೆ ತೊಂದರೆಯಾಗುತ್ತದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಲಾಗಿದೆ’ ಎಂದರು.

ಕಡಿಮೆ ಸಮಯದಲ್ಲಿ ಸಮಸ್ಯೆ ಪರಿಹರಿಸಲು ಬೆಂಗಳೂರು, ಹೈದರಾಬಾದ್, ಚೆನ್ನೈನಿಂದ ತಜ್ಞರ ತಂಡ ಬರಲಿದೆ. ಬಳಿಕ ಏನು ಮಾಡಬೇಕು ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

Latest News

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ, ರಾತ್ರಿ ನಿದ್ರೆಗೆಡುವಂತಾಗಿದೆ, ಚರಂಡಿಗಳ ಸ್ವಚ್ಚತೆಯಿಲ್ಲ, ಕಪ್ಪೆ ಜಂಡಿನ ನೀರಲ್ಲೇ ಮಹಿಳೆಯರು ಬಟ್ಟೆ ತೊಳೆಯುತ್ತಿದ್ದಾರೆ ಮೊದಲು ಸ್ವಚ್ಚತೆಗೆ ಆದ್ಯತೆ ಕೊಡಿ ಎಂದ ನಾಗರಬೆಟ್ಟ ಗ್ರಾ.ಪಂ ವ್ಯಾಪ್ತಿಯ ಮಲಗಲದಿನ್ನಿ ಗ್ರಾಮದ ವಾರ್ಡ ಸಭೆಯಲ್ಲಿ ಸೇರಿದ್ದ ಸಾರ್ವಜನೀಕರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು. ಮಲಗಲದಿನ್ನಿ ಸಭೆಯಲ್ಲಿ ಪಿಡಿಓ ಮತ್ತು ಸಾರ್ವಜನೀಕರೊಂದಿಗೆ ನಡೆದ ವಾದ

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಮೇಲೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಮಾಡಿದ್ದ ಬಗ್ಗೆ ಚರ್ಚಿಸಲು ಅವಕಾಶ