ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ಕೊಪ್ಪಳ: ಮುನಿರಾಬಾದ್ ಸಮೀಪವಿರುವ ತುಂಗಭದ್ರಾ ಜಲಾಶಯದ 19 ನಂಬರ್‌ಗೇಟ್ ನ ಚೈನ್ ಲಿಂಕ್ ಕಟ್ ಆದ ಪರಿಣಾಮ ಅಧಿಕ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ತುಂಗಭದ್ರಾ ಜಲಾಶಯದ 19 ನಂಬರ್‌ಗೇಟ್ ನ ಚೈನ್ ಲಿಂಕ್ ಶನಿವಾರ ರಾತ್ರಿ 11 ಗಂಟೆಯ ಸುಮಾರಿಗೆ ತುಂಡಾಗಿರುವ ಪರಿಣಾಮ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಡ್ಯಾಂನಿಂದ ನದಿಗೆ ಹರಿದು ಹೋಗುತ್ತಿದೆ.

ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ರಾತ್ರೋರಾತ್ರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್‌ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ಡ್ಯಾಂನಲ್ಲಿ ಒತ್ತಡ ಕಡಿಮೆ ಮಾಡಲು ಇತರ ಗೇಟ್‌ಗಳಿಂದ 1 ಲಕ್ಷ ಕ್ಯುಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದೆ.

ಡ್ಯಾಮ್‌ನಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, 30 ಟಿಎಂಸಿ ಹೂಳು ತುಂಬಿದ ಹಿನ್ನೆಲೆಯಲ್ಲಿ 100 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಡ್ಯಾಂ ಭರ್ತಿಯಾಗಿ ಒಳಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ನದಿಯ ಮೂಲಕ ಹೊರ ಬಿಡಲಾಗುತ್ತಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ: https://x.com/Bnglrweatherman/status/1822454280843919453?t=fAidgxsn4I3H93oEgNwIkQ&s=19

ಡ್ಯಾಂಗೆ ಬಂದು ವೀಕ್ಷಣೆ ಮಾಡಿದ್ದೇನೆ, ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಡ್ಯಾಂ ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲ. ಸದ್ಯದ ಮಟ್ಟಿಗೆ 60 ರಿಂದ 65 ಟಿಎಂಸಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. 20 ಫೀಟ್ ನೀರು ಖಾಲಿಯಾದ್ರೆ ಮಾತ್ರ ಸಮಸ್ಯೆ ಏನಾಗಿದೆ ಅಂತ ಗೊತ್ತಾಗಲಿದೆ. ಹೀಗಾಗಿ ಡ್ಯಾಂ ನಲ್ಲಿರೋ ನೀರನ್ನು ಖಾಲಿ ಮಾಡೋ ಅನಿವಾರ್ಯತೆ ಉಂಟಾಗಿದೆ ಎಂದು ಭೇಟಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ವಿಡಿಯೋ ನೋಡಿ: https://x.com/Bnglrweatherman/status/1822481512123781491?t=7qop9R3qJarKBelb3FTUQA&s=19

2 ಲಕ್ಷ 35 ಸಾವಿರ ಕ್ಯೂಸೆಕ್ ವರೆಗೆ ನೀರು ಬಿಟ್ಟರೆ ಯಾವುದೇ ಪರಿಣಾಮವಾಗಲ್ಲ. ಎರಡೂವರೆ ಲಕ್ಷ ನೀರು ಬಿಟ್ಟರೆ ಕೆಲವು ಕಡೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಜಲಾಶಯದ ಭದ್ರತೆಯ ಕುರಿತು ಗಮನಹರಿಸುತ್ತಿದ್ದೇವೆ ಎಂದಿದ್ದಾರೆ.

Latest News

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ, ರಾತ್ರಿ ನಿದ್ರೆಗೆಡುವಂತಾಗಿದೆ, ಚರಂಡಿಗಳ ಸ್ವಚ್ಚತೆಯಿಲ್ಲ, ಕಪ್ಪೆ ಜಂಡಿನ ನೀರಲ್ಲೇ ಮಹಿಳೆಯರು ಬಟ್ಟೆ ತೊಳೆಯುತ್ತಿದ್ದಾರೆ ಮೊದಲು ಸ್ವಚ್ಚತೆಗೆ ಆದ್ಯತೆ ಕೊಡಿ ಎಂದ ನಾಗರಬೆಟ್ಟ ಗ್ರಾ.ಪಂ ವ್ಯಾಪ್ತಿಯ ಮಲಗಲದಿನ್ನಿ ಗ್ರಾಮದ ವಾರ್ಡ ಸಭೆಯಲ್ಲಿ ಸೇರಿದ್ದ ಸಾರ್ವಜನೀಕರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು. ಮಲಗಲದಿನ್ನಿ ಸಭೆಯಲ್ಲಿ ಪಿಡಿಓ ಮತ್ತು ಸಾರ್ವಜನೀಕರೊಂದಿಗೆ ನಡೆದ ವಾದ

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಮೇಲೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಮಾಡಿದ್ದ ಬಗ್ಗೆ ಚರ್ಚಿಸಲು ಅವಕಾಶ