ಕೊಪ್ಪಳ: ಮುನಿರಾಬಾದ್ ಸಮೀಪವಿರುವ ತುಂಗಭದ್ರಾ ಜಲಾಶಯದ 19 ನಂಬರ್‌ಗೇಟ್ ನ ಚೈನ್ ಲಿಂಕ್ ಕಟ್ ಆದ ಪರಿಣಾಮ ಅಧಿಕ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ತುಂಗಭದ್ರಾ ಜಲಾಶಯದ 19 ನಂಬರ್‌ಗೇಟ್ ನ ಚೈನ್ ಲಿಂಕ್ ಶನಿವಾರ ರಾತ್ರಿ 11 ಗಂಟೆಯ ಸುಮಾರಿಗೆ ತುಂಡಾಗಿರುವ ಪರಿಣಾಮ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಡ್ಯಾಂನಿಂದ ನದಿಗೆ ಹರಿದು ಹೋಗುತ್ತಿದೆ.
ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ರಾತ್ರೋರಾತ್ರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ಡ್ಯಾಂನಲ್ಲಿ ಒತ್ತಡ ಕಡಿಮೆ ಮಾಡಲು ಇತರ ಗೇಟ್‌ಗಳಿಂದ 1 ಲಕ್ಷ ಕ್ಯುಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದೆ.
🚨 ALERT MESSAGE FROM TUNGABHADRA DAM 🚨
— Karnataka Weather (@Bnglrweatherman) August 11, 2024
Gate No.19 chain link has cut & the gate is not visible. Approx 35000+ cusecs water is flowing from Gate No.19 & the discharge to river is 48000 cusecs
📢 Alert for the Downstream of TB DAM to stay safe
As the inflow rate of the… https://t.co/RVY0MrAvSh pic.twitter.com/Bb1RqCgKvo
ಡ್ಯಾಮ್‌ನಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, 30 ಟಿಎಂಸಿ ಹೂಳು ತುಂಬಿದ ಹಿನ್ನೆಲೆಯಲ್ಲಿ 100 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಡ್ಯಾಂ ಭರ್ತಿಯಾಗಿ ಒಳಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ನದಿಯ ಮೂಲಕ ಹೊರ ಬಿಡಲಾಗುತ್ತಿದೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ: https://x.com/Bnglrweatherman/status/1822454280843919453?t=fAidgxsn4I3H93oEgNwIkQ&s=19
ಡ್ಯಾಂಗೆ ಬಂದು ವೀಕ್ಷಣೆ ಮಾಡಿದ್ದೇನೆ, ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಡ್ಯಾಂ ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲ. ಸದ್ಯದ ಮಟ್ಟಿಗೆ 60 ರಿಂದ 65 ಟಿಎಂಸಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. 20 ಫೀಟ್ ನೀರು ಖಾಲಿಯಾದ್ರೆ ಮಾತ್ರ ಸಮಸ್ಯೆ ಏನಾಗಿದೆ ಅಂತ ಗೊತ್ತಾಗಲಿದೆ. ಹೀಗಾಗಿ ಡ್ಯಾಂ ನಲ್ಲಿರೋ ನೀರನ್ನು ಖಾಲಿ ಮಾಡೋ ಅನಿವಾರ್ಯತೆ ಉಂಟಾಗಿದೆ ಎಂದು ಭೇಟಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ವಿಡಿಯೋ ನೋಡಿ: https://x.com/Bnglrweatherman/status/1822481512123781491?t=7qop9R3qJarKBelb3FTUQA&s=19
2 ಲಕ್ಷ 35 ಸಾವಿರ ಕ್ಯೂಸೆಕ್ ವರೆಗೆ ನೀರು ಬಿಟ್ಟರೆ ಯಾವುದೇ ಪರಿಣಾಮವಾಗಲ್ಲ. ಎರಡೂವರೆ ಲಕ್ಷ ನೀರು ಬಿಟ್ಟರೆ ಕೆಲವು ಕಡೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಜಲಾಶಯದ ಭದ್ರತೆಯ ಕುರಿತು ಗಮನಹರಿಸುತ್ತಿದ್ದೇವೆ ಎಂದಿದ್ದಾರೆ.