HD Kumaraswamy on Tungabhadra dam

Tungabhadra dam: ಕಾಸಿಗಾಗಿ ಪೋಸ್ಟಿಂಗ್.. ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾರಸ್ವಾಮಿ‌ ಗಂಭೀರ ಆರೋಪ

Tungabhadra dam: ಕಾಸಿಗಾಗಿ ಪೋಸ್ಟಿಂಗ್.. ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾರಸ್ವಾಮಿ‌ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ (Tungabhadra dam) ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

Join Our Telegram: https://t.me/dcgkannada

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ಇದನ್ನೂ ಓದಿ: CM Siddaramaiah: ಮುಡಾ ಹಗರಣ.. ಸಿಎಂ ಪರ ಸಲ್ಲಿಸಿದ್ದ ಅರ್ಜಿ ವಜಾ.. ಸಿದ್ದುಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ?

ತುಂಗಭದ್ರಾ ಅಣೆಕಟ್ಟು (Tungabhadra dam) ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ