ಸಾಲಬಾಧೆ ತಾಳದೇ ಕುಂಟೋಜಿ ರೈತ ಆತ್ಮಹತ್ಯೆ

ಸಾಲಬಾಧೆ ತಾಳದೇ ಕುಂಟೋಜಿ ರೈತ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲದ ಬಾಧೆ ತಾಳದೇ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚಿರ್ಚನಕಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕುಂಟೋಜಿ ಗ್ರಾಮದ ಸಂಗಪ್ಪ ಲಕ್ಕಪ್ಪ ಗೌಡರ(ಬೊಮ್ಮಣಗಿ)(50) ಆತ್ಮಹತ್ಯೆ ಮಾಡಿಕೊಂಡಿರುವ ರೈತ.ಮೃತನ ಹೆಸರಿನಲ್ಲಿ ಕುಂಟೋಜಿ ಸರ್ವೆ ನಂಬರ್ 391/1ರಲ್ಲಿ 4.20 ಎಕರೆ ಜಮೀನು ಇದ್ದು ಇದರಲ್ಲಿ ತೊಗರಿ ಬೆಳೆದಿದ್ದ.ನಾಲ್ಕು ಬೋರವೆಲ್, ಒಂದು ತೆರೆದ ಬಾವಿ ಕೊರೆಸಿದರೂ ನೀರು ಬಿದ್ದಿರಲಿಲ್ಲ.ಇದಕ್ಕಾಗಿ ಮುದ್ದೇಬಿಹಾಳದ ಶ್ರೀ ಸಂಗಮೇಶ್ವರ ಪತ್ತಿನ ಸಹಕಾರಿ ಬ್ಯಾಂಕ್‌ನಲ್ಲಿ ಮೂರು ಲಕ್ಷ, ಕುಂಟೋಜಿ ಪಿಕೆಪಿಎಎಸ್‌ನಲ್ಲಿ 75,000 ರೂ., ಧರ್ಮಸ್ಥಳ ಸಂಘದಲ್ಲಿ ಪತ್ನಿ ಬೋರಮ್ಮಳ ಹೆಸರಿನಲ್ಲಿ 50,000 ರೂ. ಖಾಸಗಿಯಾಗಿ ಎರಡು ಲಕ್ಷ ಕೈಗಡ ಸೇರಿ ಒಟ್ಟು 6.25 ಲಕ್ಷ ಸಾಲ ಮಾಡಿಕೊಂಡಿದ್ದ.

ಜಮೀನಿನಲ್ಲಿ ಹಾಕಿದ್ದ ತೊಗರಿ ಬೆಳೆ ನಿರಂತರ ಮಳೆಗೆ ನಾಶವಾಗಿತ್ತು. ಸಾಲ ತೀರಿಸುವುದು ಹೇಗೆ ಎಂದು ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ರೈತನ ಪತ್ನಿ ಬೋರಮ್ಮ ಗೌಡರ ಪೊಲೀಸರಿಗೆ ದೂರು ನೀಡಿದ್ದಾರೆ.ರೈತನಿ ಪತ್ನಿ, ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

ಪರಿಹಾರಕ್ಕೆ ಆಗ್ರಹ:
ನಿರಂತರ ಮಳೆಗೆ ತೊಗರಿ ಬೆಳೆ ಹಾನಿಗೀಡಾಗಿದ್ದು ಸಾಲ ತೀರಿಸುವುದು ಹೇಗೆಂದು ಮನನೊಂದು ರೈತ ಸಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅವರ ಕುಟುಂಬಕ್ಕೆ ಸರ್ಕಾರದಿಂದ ಕನಿಷ್ಠ 50 ಲಕ್ಷ ಪರಿಹಾರ ಕೊಡಬೇಕು ಎಂದು ಬಿಜೆಪಿ ಜಿಲ್ಲಾ ಮುಖಂಡ ಅಶೋಕ ರಾಠೋಡ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ