ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada
ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.
ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.
ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.
ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!
ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.
‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..
ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ಸೃಷ್ಟಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.
ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.
ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.
ಬಿಎಸ್‌ವೈ ನಡೆ ಅನುಸರಿಸಿ:
ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.