ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600 ಮೀ. ಓಟದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ದ್ವಿತೀಯ, ಚಕ್ರ ಎಸೆತದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ ಹಾಗೂ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಹಲವು ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಕಬಡ್ಡಿಯಲ್ಲಿ ದ್ವಿತೀಯ, ಥ್ರೋಬಾಲ್‌ನಲ್ಲಿ ಪ್ರಥಮ, 400 ಮೀ. ಓಟದಲ್ಲಿ ಪ್ರಥಮ, 600 ಮೀ. ಓಟದಲ್ಲಿ ದ್ವಿತೀಯ, ಚಕ್ರ ಎಸೆತದಲ್ಲಿ ದ್ವಿತೀಯ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನಗಳನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎಂ.ಎಸ್. ಕೊಪ್ಪ ಅವರು, ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ, ಕ್ರೀಡೆಯೂ ಅಷ್ಟೇ ಮುಖ್ಯವಾಗಿದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅತ್ಯುತ್ತಮ ಸಾಧನವಾಗಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಉನ್ನತ ಮಟ್ಟದ ಶಿಕ್ಷಣದ ಜೊತೆಗೆ ಕ್ರೀಡಾಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡುತ್ತಿರುವುದು ಸಂತಸದ ವಿಷಯವಾಗಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಾಲೆಯ ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು, ಮುಂದಿನ ಹಂತದ ಸ್ಪರ್ಧೆಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಇನ್ನಷ್ಟು ಪ್ರಶಸ್ತಿಗಳನ್ನು ಶಾಲೆಗೆ ತಂದುಕೊಡಬೇಕು ಎಂದು ಆಶಿಸಿದರು.

ವಿದ್ಯಾರ್ಥಿಗಳ ಸಾಧನೆಯ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯಗುರುಮಾತೆ ರೇಖಾ ಎಂ.ಎಸ್., ದೈಹಿಕ ಶಿಕ್ಷಕ ಕುಮಾರ ಹೂಗಾರ, ತರಬೇತುದಾರ ಸಿದ್ದು ಸೇರಿದಂತೆ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂಭ್ರಮಿಸಿದರು.

Latest News

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ ಚಟುವಟಿಕೆಗಳನ್ನು ಬಲಪಡಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಎಂದು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಹಿರೇಮುರಾಳದ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಅಂಕಲಿಮಠದ ವೀರಭದ್ರ ಸ್ವಾಮೀಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರು ತಮ್ಮ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ