ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ.

ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು.

ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್, ಅಂಜುಮನ್ ಸಂಸ್ಥೆಯ ಕೇರಟೇಕರ್ ತಬಸ್ಸುಮ್ ಮುಲ್ಲಾ,ತಹಶೀಲ್ದಾರ ಆನಂದ ಕೋಲಾರ,ಸಿಪಿಐ ಮೊಹ್ಮದ ಫಸಿವುದ್ದೀನ್,ಪಿಎಸ್‌ಐ ಸಂಜಯ ತಿಪರೆಡ್ಡಿ,ಆಲಮಟ್ಟಿ,ತಾಳಿಕೋಟಿ ಪಿಎಸೈಗಳು ಮತ ಎಣಿಕೆ ಕಾರ್ಯಪೂರ್ಣಗೊಳ್ಳುವವರೆಗೂ ಮತ ಎಣಿಕೆ ಕೇಂದ್ರದಲ್ಲಿದ್ದು ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನೋಡಿಕೊಂಡರು.

ಫಲಿತಾoಶ ಪ್ರಕಟಿಸಿರುವ ಚುನಾವಣಾಧಿಕಾರಿ ಔದ್ರಾಮ್, ಕಲ್ಬುರ್ಗಿ ಹೈಕೋರ್ಟ್ ಪೀಠದ ಎರಡು ಪ್ರಕರಣಗಳ ಅಂತಿಮ ಆದೇಶಕ್ಕೆ ಈ ಫಲಿತಾಂಶವು ಒಳಗೊಂಡಿದೆ ಎಂದು ಘೋಷಿಸಿದರು.ಡಿವೈಎಸ್ಪಿ ಚಂದ್ರಕಾoತ ನಂದರೆಡ್ಡಿ ಸಂಜೆಯವರೆಗೂ ಮತ ಎಣಿಕೆ ಕೇಂದ್ರದಲ್ಲಿದ್ದು ಕಿರಿಯ ಅಧಿಕಾರಿಗಳಿಗೆ ಭದ್ರತೆ ಉಸ್ತುವಾರಿ ಮಾರ್ಗದರ್ಶನ ಮಾಡಿದರು.

ಒಟ್ಟು 2625 ಮತದಾರರ ಪೈಕಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.ಶೇ.92.95ರಷ್ಟು ದಾಖಲೆ ಪ್ರಮಾಣದ ಮತದಾನ ದಾಖಲಾಗಿತ್ತು.ಚುನಾವಣಾಧಿಕಾರಿಯಿಂದ ನಾಮಪತ್ರ ತಿರಸ್ಕಾರಗೊಂಡು ಕಣದಿಂದ ಹೊರಗೆ ಬಿದ್ದಿದ್ದ ಅಂಜುಮನ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ,ಪತ್ರಕರ್ತ ಗುಲಾಮಮೊಹ್ಮದ ದಫೇದಾರ, ಟೆಂಟ್ ಹೌಸ್ ಮಾಲೀಕರ ಸಂಘದ ಅಧ್ಯಕ್ಷ ಯಾಸೀನ ಸೋಠೆ,ಕಾರ್ಮಿಕ ಮುಖಂಡ ಇಸ್ಮಾಯಿಲ್ ಗೋಲಂದಾಜ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರಿ 12ಗಂಟೆಯಾದರೂ ಅಭ್ಯರ್ಥಿಗಳ ಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆಯನ್ನು ಕಾದು ಕೂತಿದ್ದ ಸಾವಿರಾರು ಬೆಂಬಲಿಗರು ವಿಜಯಪುರ ರಸ್ತೆಯಲ್ಲಿ ಗೆಲುವಿನ ಸಂಭ್ರಮಾಚರಣೆ ಆಚರಿಸುವುದು ಕಂಡು ಬಂದಿತು.

ಗೆಲುವು ಸಾಧಿಸಿದವರು:
ಅಬ್ದುಲಮಜೀದ ಮಕಾನದಾರ(ಮುನ್ನಾ)-1052,ಡೋಂಗ್ರಿಸಾಬ ಢವಳಗಿ-962,ಅಲ್ಲಾಭಕ್ಷ ದೇಸಾಯಿ-954,ಇರ್ಫಾನಲಿ ಕೂಡಗಿ-940,ರಮಜಾನ್ ನದಾಫ-882.ನೂರೇಹುಸೇನ್ ನದಾಫ(ಸದ್ದಾಂ)-872,ಅಬ್ದುಲಗಫೂರ ಮಕಾನದಾರ-871,ಲಾಲಸಾ ಮೋಮಿನ(ದಾದಾ)-851,ಅಬ್ದುಲಅಜೀಜ ನಾಯ್ಕೋಡಿ-815,ಇಶಾಕಸಾ ಮಕಾನದಾರ-794,ಮೊಹ್ಮದರಫೀಕ ನಾಗರಾಳ-773,ಹುಸೇನಬಾದಷಾ ಸಾಲಿಮನಿ-755,ಯಾಸೀನ ಸೋಠೆ-755,ಅತಾವುಲ್ಲಾಷಾ ಮಕಾನದಾರ-734,ಇಸ್ಮಾಯಿಲ್ ಗೊಳಸಂಗಿ-722,ಅಸ್ಲಾo ನಾಗೂರ-717,ಶಬ್ಬೀರ ಕಲ್ಮನಿ-696,ಇಸ್ಮಾಯಿಲ್ ಗೋಲಂದಾಜ-687,ಮಹೆಬೂಬ ಎಂ.ಮುಲ್ಲಾ-672,ಮಹೆಬೂಬ ಆರ್.ಮುಲ್ಲಾ(ಟಾಪ್‌ಇನ್‌ಟೌನ್)-672,ಉಮರಫಾರೂಕ್ ಚೌಧರಿ-667,ಸುಲೇಮಾನ ಮಮದಾಪುರ-660,ಗುಲಾಮಮೊಹ್ಮದ ದಫೇದಾರ-640,ಅಬ್ದುಲಜಬ್ಬಾರ ಗೋಲಂದಾಜ-630,ಅಮೀರಸೂಹೈಲ್ ದಖನಿ-626 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ