ವಿಜಯಪುರ: ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ದಾರುಣವಾಗಿ ಮೃತಪಟ್ಟಿದ್ದಾನೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ದೇವೇಂದ್ರ ಬಡಿಗೇರ್ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಬಿಬಿ ಇಂಗಳಗಿಯ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ದೇವೇಂದ್ರ ಮೃತಪಟ್ಟಿದ್ದಾನೆ. ಈ ದುರಂತದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವವಾಗ ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!
ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.