ವಿಜಯವಾಡ: ಫಾರ್ಮಾ ಕಂಪನಿ ಸ್ಫೋಟಗೊಂಡು (Vijayawada blast) 17 ಜನರು ಸಾವನ್ನಪ್ಪಿದ್ದು, 41 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿ ಬುಧವಾರ ಸಂಭವಿಸುದೆ.
Join Our Telegram: https://t.me/dcgkannada
ಎಸೆನ್ಸಿಯಾ ಎಂಬ ಫಾರ್ಮಾ ಕಂಪನಿಯ ಘಟಕದಲ್ಲಿ ಈ ಘಟನೆ ಸಂಭವಿಸಿದೆ. ಮೊದಲು ರಿಯಾಕ್ಟರ್ ನಲ್ಲಿ ಸ್ಫೋಟ ಸಂಭವಿಸಿದ್ದರಿಂದ ಘಟನೆ ನಡೆದಿದೆ ಎನ್ನಲಾಗಿತ್ತು. ಆದರೆ, ಬಳಿಕ ವಿದ್ಯುತ್ ಪೂರೈಕೆಯ ಸಮಸ್ಯೆಯಿಂದ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.
ಕಾರ್ಖಾನೆಯಲ್ಲಿ 331 ನೌಕರರಿದ್ದಾರೆ. ಊಟದ ಸಮಯದಲ್ಲಿ ಈ ಅವಘಡ ನಡೆದಿದ್ದರಿಂದ ಇನ್ನಷ್ಟು ಅನಾಹುತ ತಪ್ಪಿದೆ. ಇಲ್ಲದಿದ್ದರೆ ನೂರಾರು ಸಾವು
ಸಂಭವಿಸುತ್ತಿದ್ದವು ಎನ್ನಲಾಗಿದೆ. (Vijayawada blast)
ಇದನ್ನೂ ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy
ಸ್ಪೋಟದಿಂದ ಸುತ್ತಮುತ್ತಲಿನ ಹಳ್ಳಿಗಳಿಗೆ ಹೊಗೆ ಆವರಿಸಿದೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎನ್ ಟಿಆರ್ ಆಸತ್ರೆಗೆ ರವಾನಿಸಲಾಗಿದೆ.