ಮಂಗಳೂರು: ಪಲ್ಟಿಯಾದ ಆಟೋರಿಕ್ಷಾವನ್ನೇ ಒಂದೇ ಟೇಕ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ಮೇಲಕ್ಕೆತ್ತಿ ನಿಲ್ಲಿಸಿ ರಿಕ್ಷಾದಡಿ ಸಿಲುಕಿದ್ದ ತನ್ನ ತಾಯಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾಳೆ ಈ ವೀರ ಬಾಲಕಿ!
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ಹೌದು, ಏಳನೇ ತರಗತಿ ವಿದ್ಯಾರ್ಥಿನಿಯ ಈ ಸಾಹಸಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕಿನ್ನಿಗೋಳಿಯ ಈ ಸಾಹಸ ಮಾಡಿದ ಧೀರ ಬಾಲಕಿಯ ಹೆಸರು ವೈಭವಿ. ಕಿನ್ನಿಗೋಳಿ ರಾಮಮಂದಿರ ಸಮೀಪ ಶುಕ್ರವಾರ ರಾತ್ರಿ ಸುಮಾರು 7.30ರ ವೇಳೆಗೆ ಕಿನ್ನಿಗೋಳಿ ರಾಜರತ್ನಪುರದ ನಿವಾಸಿ ಚೇತನಾ (35) ಅವರು ರಸ್ತೆ ದಾಟುತ್ತಿದ್ದಾಗ ಕಟೀಲು ಕಡೆಯಿಂದ ಬಂದ ರಿಕ್ಷಾ ಮಹಿಳೆಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಮಹಿಳೆ ರಿಕ್ಷಾದಡಿ ಬಿದ್ದು ಗಂಭೀರ ಗಾಯಗೊಂಡಿದ್ದರು.
ಘಟನಾ ಸ್ಥಳದ ಸಮೀಪದಲ್ಲೇ ಟ್ಯೂಶನ್ ಕ್ಲಾಸ್ ಬಿಟ್ಟು ಹೊರಬರುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿ ಕಣ್ಣೆದುರೇ ಘಟನೆ ಸಂಭವಿಸಿದೆ. ಆಗ ಆಕೆ ಓಡೋಡಿ ಬಂದು ಒಂದೇ ಉಸಿರಲ್ಲಿ ರಿಕ್ಷಾವನ್ನು ಮೇಲಕ್ಕೆತ್ತಿ ತಾಯಿಯನ್ನು ರಕ್ಷಿಸಿದ್ದಾಳೆ.
ಇದೇ ವೇಳೆ ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿದ್ದ ಇನ್ನಿತರ ಕೆಲವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಪಿಗ್ಮಿ ಕಲೆಕ್ಷನ್ ಕೆಲಸ ಮಾಡುವ ಚೇತನಾ ಮಗಳನ್ನು ಕರೆದೊಯ್ಯಲು ಅಲ್ಲಿಗೆ ಬಂದಿದ್ದರು. ಈ ವೇಳೆ ಘಟನೆ ಸಂಭವಿಸಿದೆ.
ಸಿಎಂ ಶಹಬ್ಬಾಸ್ ಗಿರಿ:
ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ… pic.twitter.com/bo6tDWJPJb
— Siddaramaiah (@siddaramaiah) September 9, 2024
ಈ ಧೀರ ಬಾಲಕಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.
ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.
ಇದನ್ನೂ ಓದಿ: Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!
ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದಿದ್ದಾರೆ.