ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪ್ರಶ್ನಿಸಿದ್ದಾರೆ.

ಪಟ್ಟಣದ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಭಾನುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದಿAದ ವಿಜಯಪುರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ 4ನೇ ಬೃಹತ್ ರೈತ ಜಾಗೃತಿ ಸಮಾವೇಶದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಯಲ್ಲಿ ಜೀವನಾಡಿಯಾಗಿರುವ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು 524.256 ಮಿ ಎತ್ತರಿಸುವ ಪ್ರಸ್ತಾವ ಸರ್ಕಾರದ ಮಟ್ಟದಲ್ಲಿ ನನೆಗುದಿಗೆ ಬಿದ್ದಿದೆ.ಜಿಲ್ಲೆಯಲ್ಲಿ ಕಬ್ಬು,ಈರುಳ್ಳಿ,ನಿಂಬೆ ಸೇರಿದಂತೆ ಪ್ರಮುಖ ಬೆಳೆಗಳ ಬೆಲೆ ಕುಸಿತವಾಗಿದ್ದರೂ ಸರ್ಕಾರ ರೈತರ ನೆರವಿಗೆ ಧಾವಿಸುತ್ತಿಲ್ಲ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವಾಮಿನಾಥನ್ ವರದಿ ಜಾರಿಗೆ ತರುತ್ತಿಲ್ಲ.79 ವರ್ಷ ನಮ್ಮನ್ನಾಳಿದ ಸರ್ಕಾರಗಳಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ದೂರಿದರು.

ಮೇ.8 ರಂದು ವಿಜಯಪುರದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.ವಿದ್ಯುತ್,ನೀರಾವರಿ,ಹೈನುಗಾರಿಕೆ ಖಾಸಗಿಯವರ ಪಾಲಾಗುತ್ತಿದೆ.ಈ ಬಗ್ಗೆ ಅರಿವು ಮೂಡಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ.ನಾಗರಬೆಟ್ಟ ಏತ ನೀರಾವರಿ ಯೋಜನೆ ಆರಂಭಕ್ಕೆ ಅಧಿಕಾರಿಗಳು,ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಸಂಘಟನೆಯಿAದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಯಾವುದೇ ಪಕ್ಷ ,ರಾಜಕಾರಣಿಗಳು ಆಡಳಿತದ ಸಮಯದಲ್ಲಿ ಬೆಂಬಲ ನೀಡಿಲ್ಲ.ವಿರೋಧ ಪಕ್ಷದಲ್ಲಿದ್ದಾಗ ರೈತರನ್ನು ಬಳಸಿಕೊಂಡಿದ್ದಾರೆ.ಎಲ್ಲ ಸರಕಾರಗಳಿಂದ ರೈತರಿಗೆ ಮೋಸವಾಗುತ್ತಿದೆ.ರೈತರಿಗೆ 25 ಸಾವಿರದಲ್ಲಿ ದೊರೆಯುವ ಟಿಸಿ ಈಗ ಮೂರು ಲಕ್ಷ ರೂ.ಕೊಡಬೇಕಾಗಿದೆ.ಟಿಸಿಗೆ ಮೀಟರ್ ಕೂಡಿಸಲು 18-20 ಸಾವಿರ ರೂ.ತಗೆದುಕೊಳ್ಳುತ್ತಿದ್ದಾರೆ.ಕಾಲುವೆಗಳು ಒಡೆದು ಹೋಗಿದ್ದರೂ ಕೇಳುವವರಿಲ್ಲ.2018ರಲ್ಲಿ ಆರಂಭವಾಗಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆ ಹತ್ತು ವರ್ಷಗಳಾಗುತ್ತ ಬಂದಿದ್ದರೂ ಈವರೆಗೂ ಮುಗಿದಿಲ್ಲ.ವಿಜಯಪುರದಲ್ಲಿ ಮೇ.8 ರಂದು ನಡೆಯಲಿರುವ ರೈತ ಜನಜಾಗೃತಿ ಸಮಾವೇಶಕ್ಕೆ ತಾಲ್ಲೂಕಿನ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ರೈತರ ವಿಷಯದಲ್ಲಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತೇನೆ.ಸಂದರ್ಭ ಬಂದರೆ ನಾನು ಇರುವ ಪಕ್ಷ ಬಿಡುತ್ತೇನೆ.ಆದರೆ ರೈತರಿಗೆ ಅನ್ಯಾಯವಾಗುವುದಕ್ಕೆ ಯಾವತ್ತಿಗೂ ಬಿಡುವುದಿಲ್ಲ ಎಂದು ಮುಖಂಡ ಶಾಂತಗೌಡ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ,ವಿಜಯಪುರ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊoಡು ಈ ಸಮಾವೇಶ ಆಯೋಜಿಸಲಾಗಿದ್ದು ಸಾಧಕ ರೈತರಿಗೆ ನೇಗಿಲಯೋಗಿ ಪ್ರಶಸ್ತಿ ಹಾಗೂ ವಿವಿಧ ಕ್ಷೇಥ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟಿçÃಯ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ,ತಾಲ್ಲೂಕು ಅಧ್ಯಕ್ಷ ಮಹಾಂತಗೌಡ ಬಿರಾದಾರ,ಕೋಲ್ಹಾರ ತಾಲ್ಲೂಕು ಅಧ್ಯಕ್ಷ ಸೋಮು ಬಿರಾದಾರ,ಮುಖಂಡರಾದ ಮುತ್ತು ಹಿರೇಮಠ,ಅಪ್ಪುಗೌಡ ಪಾಟೀಲ,ಶಿವನಗೌಡ ಕೇಸಪ್ಪಗೌಡರ,ಈಶ್ವರ ಬಡಿಗೇರ ಮೊದಲಾದವರು ಇದ್ದರು.

ರಾಜಕಾರಣಿಗಳು ತಲೆ ತಗ್ಗಿಸಬೇಕು-ನಡಹಳ್ಳಿ: ಎಂಟು ಸಾವಿರ ಎಕರೆ ನೀರಾವರಿಗೆ ಒಳಪಡುವ ನಾಗರಬೆಟ್ಟ ಏತ ನೀರಾವರಿ ಯೋಜನೆ ಕಳೆದ ಹತ್ತು ವರ್ಷಗಳಿಂದ ಪೂರ್ಣಗೊಳ್ಳದೇ ಇರುವುದಕ್ಕೆ ಈ ಭಾಗದ ರಾಜಕಾರಣಿಗಳು ತಲೆತಗ್ಗಿಸಬೇಕು.ಕೆಲವು ರೈತರು ತಮಗೆ ಅವಾರ್ಡ್ ಕಾಪಿ ಕೊಟ್ಟರೆ ಕೆಲಸ ಆರಂಭಿಸಲು ತಿಳಿಸುತ್ತಿದ್ದಾರೆ.ಸರ್ಕಾರ ಅವರಿಗೆ ಅವಾರ್ಡ ಕಾಪಿ ಕೊಟ್ಟು ಕಾಲುವೆ ಬಾಕಿ ಕೆಲಸ ಪೂರ್ಣಗೊಳಿಸಬೇಕು.ಒಂದು ತಿಂಗಳ ಒಳಗಾಗಿ ಕಾಲುವೆ ಕಾಮಗಾರಿ ಕೆಲಸ ಆರಂಭಗೊಳ್ಳದಿದ್ದಲ್ಲಿ ಯೋಜನೆ ವ್ಯಾಪ್ತಿಯಲ್ಲಿ ಒಳಪಡುವ 30ಹಳ್ಳಿಗಳ ರೈತರೊಂದಿಗೆ ಉಗ್ರ ಹೋರಾಟ ಮಾಡುತ್ತೇವೆ.ಜನಪ್ರತಿನಿಧಿಗಳ ಮನೆ ಮುಂದೆಯೂ ನಾವು ಹೋರಾಟ ಮಾಡಬೇಕಾಗುತ್ತದೆ.
—ಶಾಂತಗೌಡ ಪಾಟೀಲ ನಡಹಳ್ಳಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ