Crime news: Child killed in husband-wife fight..!

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ.

ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.

ದಂಪತಿ ನಡುವೆ ಕೌಟುಂಬಿಕ ವಿಷಯಕ್ಕೆ ದೊಡ್ಡ ಜಗಳ ಉಂಟಾಗಿದೆ. ನನ್ನ ತಂದೆ-ತಾಯಿಗೆ ನೀನು ಸರಿಯಾಗಿ ಮರ್ಯಾದೆ ಕೊಡುವುದಿಲ್ಲ ಎಂದು ಪತಿ ರಾಜೇಶ್

ಪತ್ನಿಗೆ ಬೈದಿದ್ದರು. ಇದೇ ಕಾರಣಕ್ಕೆ ತೀವ್ರ ಬೇಸರಗೊಂಡಿದ್ದ ಲಕ್ಷಿಪ್ರಿಯಾ, ರಾತ್ರಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮದುವೆಯಾದಾಗಿನಿಂದಲೂ ರಾಜೇಶ್ ಆರಾಧ್ಯ ಹಾಗೂ ಆತನ ಕುಟುಂಬ ಸದಸ್ಯರು ಲಕ್ಷಿಪ್ರಿಯಾಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಹಿಂಸೆ ನೀಡುತ್ತಿದ್ದರು. ಜಗಳ ‘ಹಾಗೂ ಈ ಹಿಂದಿನ ಕಿರುಕುಳವೇ ಮಗಳ ಆತ್ಮಹತ್ಯೆಗೆ ನೇರ ಕಾರಣ ಎಂದು ಆರೋಪಿಸಿದ್ದಾರೆ.

ಮೃತ ಲಕ್ಷಿಪ್ರಿಯಾ ಪೋಷಕರು ನೀಡಿದ ದೂರಿನ ಅನ್ವಯ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪತಿ ರಾಜೇಶ್ ಆರಾಧ್ಯ ಹಾಗೂ ಆತನ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ