ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ ಆಗಿಲ್ಲ.ಇದೊಂದು ಧಾರ್ಮಿಕ ಸಂಸ್ಥೆ. ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಈ ಸಂಸ್ಥೆಯಲ್ಲಿ ಹಸ್ತಕ್ಷೇಪ ನಾನು ಮಾಡುವುದರಿಂದ ಉಪಯೊಗ ಏನಿದೆ.ಅಲ್ಲಿ ನನ್ನ ಮಕ್ಕಳೇನಾದರೂ ಕಲಿಯುತ್ತಾರಾ ? ಅಲ್ಲಿ ಮಳಿಗೆ ಕೇಳಿದ್ದೀನಾ ? ಎಂದು ಶಾಸಕ ಸಿ.ಎಸ್.ನಾಡಗೌಡ ಪ್ರಶ್ನಿಸಿದರು.

ಪಟ್ಟಣದ ಹುಡ್ಕೋದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದ ಮೂರ್ತಿ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸ್ ಅಧಿಕಾರಿಗಳು,ಸಿಬ್ಬಂದಿ ಹಾಗೂ ಅಂಜುಮನ್ ಕಮೀಟಿ ನೂತನ ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಜುಮನ್ ಸಂಸ್ಥೆಗೆ ಆಯ್ಕೆಯಾದವರು ಬಡವನ ಸಮಸ್ಯೆ ಬಗೆ ಹರಿಸುವ ಕೆಲಸ ಮಾಡಬೇಕು.ಸಮಾಜದ ವಿಷಯ ಬಂದಾಗ ಒಗ್ಗೂಡಿ ಹೋರಾಟ ಮಾಡಬೇಕು.ವಿಜಯಪುರದ ಅಂಜುಮನ್ ಆಸ್ತಿ ಬಿಟ್ಟರೆ ಮುದ್ದೇಬಿಹಾಳ, ತಾಳಿಕೋಟಿಯಲ್ಲಿ ಹೆಚ್ಚಿನ ಪ್ರಮಾಣದ ಆಸ್ತಿ ಸಂಸ್ಥೆಗಿದೆ.ಸರಕಾರದಿAದ ನೆರವು ಕೊಡುವುದಕ್ಕೆ ಸಾಧ್ಯವಿದೆ.ಅದಕ್ಕೆ ಹಣ ಮೀಸಲಾಗಿರಿಸಿದ್ದೇನೆ.ಸಿಎಂ ಐಡಿಯಲ್ಲಿ ಶೇ.7-10 ರಷ್ಟು ಅನುದಾನವನ್ಜು ಕೊಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಬಸರಕೋಡ ಘಟನೆ ರಾಜ್ಯದಲ್ಲಿಯೇ ಅತೀ ದೊಡ್ಡ ಸುದ್ದಿ ಮಾಡಿತ್ತು.ಜೀವ ಒತ್ತೆ ಇಟ್ಟು ಹೋರಾಟ ನಡೆಸಿ ಮೂರ್ತಿಯ ಬೆಳ್ಳಿ ವಾಪಸ್ ತಂದ ಅಧಿಕಾರಗಳನ್ನು ಗೌರವಿಸುವ ಕೆಲಸ ಮಾಡಬೇಕು.ನ್ಯಾಯಯುತ ವಾಗಿ ನಡೆದುಕೊಳ್ಳುವುದಕ್ಕೆ ಸಾಧ್ಯವಾದರೆ ರಾಮ ರಾಜ್ಯದ ಕನಸು ಈಡೇರಿಸಬಹುದು ಎಂದರು.

ಪೊಲೀಸರು ಇರದಿದ್ದರೆ ಮೂಲೆ ಮೂಲೆಯಲ್ಲು ಕೊಲೆ,ಹಗಲು ದರೋಡೆ,ಜಾತಿ ಜಾತಿ ವಿರಸ,ಕೋಮುಗಲಭೆ ಶಾಂತಿ ಭಂಗ ಉಂಟಾಗಿ ಅಶಾಂತೆ ಉಂಟಾಗುತ್ತಿತ್ತು.ವ್ಯವಸ್ಥೆಯನ್ನು ದೃಢಗೊಳಿಸುವ ಕೆಲಸ ಮಾಡಬೇಕು ಎಂದರು.ವಾಯ್.ಎಚ್.ವಿಜಯಕರ್,ಸಿಪಿಐ ಮೊಹ್ಮದ ಫಸಿವುದ್ದೀನ್,ಬಸರಕೋಡದ ಪ.ಬ.ದೇವಸ್ಥಾನ ಕಮಿಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ,ಪಿಎಸೈ ಸಂಜಯ ತಿಪರೆಡ್ಡಿ,ಅಂಜುಮನ್ ಕಮೀಟಿ ಸದಸ್ಯ ಅಬ್ದುಲಗಫೂರ ಮಕಾನದಾರ ಮಾತನಾಡಿದರು.

ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಗಣ್ಯರಾದ ಎಂ.ಆರ್.ನಾಡಗೌಡ್ರ ಕ್ರೆö ಪಿಎಸೈ ಆರ್.ಎಸ್.ಭಂಗಿ,ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಮುತ್ತಣ್ಣ ಕಡಿ, ಬಾಲಾಜಿ ಶುಗರ್ಸ್ ನಿರ್ದೇಶಕ ರಾಹುಲಗೌಡ ಪಾಟೀಲ,ಎಚ್.ಬಿ.ಸಾಲಿಮನಿ ಇದ್ದರು.ಲಕ್ಷö್ಮಣ ಲಮಾಣಿ ನಿರೂಪಿಸಿದರು.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ