ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರ ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆ ಕಾಶೀಬಾಯಿ ರಾಂಪೂರ ವಿನಂತಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮ್ಮೇಳನದಲ್ಲಿ ಎಲ್ಲ ಜಾತಿ ಜನಾಂಗದವರು ಪಾಲ್ಗೊಳ್ಳಲಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.ಹಿಂದೂ ಸಮ್ಮೇಳನದ ಅಂಗವಾಗಿ ವಿವಿಧ ಕಡೆಗಳಲ್ಲಿ ಸ್ವತಃ ತಿರುಗಾಡಿ ಸಮ್ಮೇಳನದ ಕರಪತ್ರಗಳನ್ನು ವಿತರಿಸಿ ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.







