ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು ಅಂತಹ ತಾಂತ್ರಿಕ ನೈಪುಣ್ಯತೆಯ ಕಾಲೇಜು ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಇರಲಿಲ್ಲ.ಇದೀಗ ಶಾಸಕ ಸಿ.ಎಸ್.ನಾಡಗೌಡ ಅವರು ವಿಶೇಷ ಮುತುವರ್ಜಿ ವಹಿಸಿ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರವನ್ನು ತಂದಿದ್ದು ಯುವಜನರು,ಮಧ್ಯಮ ವರ್ಗದವರಿಗೆ ಈ ಕಾಲೇಜು ಹೊಸ ಭರವಸೆಯನ್ನು ಹುಟ್ಟು ಹಾಕಿದೆ.

ಪಟ್ಟಣದ ಪುರಸಭೆ,ಲೋಕೋಪಯೋಗಿ, ಕೆ.ಆರ್.ಐ.ಡಿ.ಎಲ್ ಹಾಗೂ ಕೆ.ಎಸ್.ಡಿ.ಎಲ್. (ಸಿ.ಎಸ್.ಆರ್) ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಸೆ.3 ರಂದು ಹಮ್ಮಿಕೊಳ್ಳಲಾಗಿದ್ದು ಅದರಲ್ಲಿ ನೂತನ ಕೈಗಾರಿಕಾ ತರಬೇತಿ ಕೇಂದ್ರದ ಕಟ್ಟಡ ಉದ್ಘಾಟನೆಯೂ ಸೇರಿದೆ.ಅಲ್ಲದೇ ಬಹುನಿರೀಕ್ಷಿತ ತಾಪಂ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಸೇರಿದಂತೆ ಒಟ್ಟು 8.63 ಕೋಟಿ ರೂ.ಕಾಮಗಾರಿಗಳಿಗೆ ಚಾಲನೆ ಸಿಗಲಿದೆ.

ಬೆಳಗ್ಗೆ 10ಕ್ಕೆ ಮುದ್ದೇಬಿಹಾಳ ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪಾರ್ವತಿಬಾಯಿ ಬೋರಮಲ್ ಓಸ್ವಾಲ್ (ಜೈನ್) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ, 11.00 ಘಂಟೆಗೆ ಇಂದಿರಾ ನಗರದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ,ಮದ್ಯಾಹ್ನ 12.00 ಘಂಟೆಗೆ ತಾ.ಪಂ ನೂತನ ಪಂಚಾಯತಿ ಕಟ್ಟಡ ನಿರ್ಮಾಣಕ್ಕೆ ಚಾಲನೆ,1.00 ಘಂಟೆಗೆ ತಾಪಂ ಕಚೇರಿಯಲ್ಲಿ ಬಯಲು ರಂಗಮAದಿರ ನಿರ್ಮಾಣ,ಹಳೆ ಪೊಲೀಸ್ ಠಾಣೆಯ ಕಟ್ಟಡ ನವೀಕರಣ,3.00 ಘಂಟೆಗೆ ಮುದ್ದೇಬಿಹಾಳ ಪಟ್ಟಣದ ಸರ್ಕಲ್‌ಗಳಿಗೆ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡುವರು.

3.30 ಘಂಟೆಗೆ ಮುದ್ದೇಬಿಹಾಳ ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ (ಬಸವೇಶ್ವರ ಸರ್ಕಲ್ ಹತ್ತಿರ) ಕಾಮಗಾರಿ ಪರಿಶೀಲನೆ,ಸಾಯಂಕಾಲ 4.00 ಘಂಟೆಗೆ ಮುದ್ದೇಬಿಹಾಳ ಪಟ್ಟಣದ ಮೆಹಬೂಬ ನಗರದ ಸರ್ಕಾರಿ ಉರ್ದು ಶಾಲೆಯ 4 ಕೊಠಡಿಗಳ ನಿರ್ಮಾಣಕ್ಕೆ ಚಾಲನೆ, 5.00 ಘಂಟೆಗೆ ಮುದ್ದೇಬಿಹಾಳ ಪಟ್ಟಣದ ಗ್ರಾಮದೇವತೆ ದೇವಸ್ಥಾನ ಹತ್ತಿರ ನಿರ್ಮಾಣವಾಗುತ್ತಿರುವ ಮೆಗಾ ಮಾರ್ಕೆಟ್ ಕಾಮಗಾರಿ ಪರಿಶೀಲನೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ ಜೊತೆಗೆ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಜಾಗೃತಿ ಮೂಡಿಸಿದ್ದರು ಎಂದು ಹೆಸ್ಕಾಂ ಎಇಇ ಆರ್.ಆರ್.ಹಂಡಿ ಹೇಳಿದರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಮಾಜಿಕ ಅಸಮಾನತೆ,ಜಾತೀಯತೆ,ಅಸ್ಪೃಶ್ಯತೆಯ ವಿರುದ್ಧ ಹಿಂದಿನ ಕಾಲದಲ್ಲಿ ಶರಣರು,ಸಮಾಜ ಸುಧಾರಕರು ಹೋರಾಡಿದ್ದಾರೆ.ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು