ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ.
ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಚೆಕ್ ಮೂಲಕ ಅಥವಾ ಉಚಿತ ಶಿಕ್ಷಣ ಶಾಲೆಯಲ್ಲಿ ನೀಡಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.
ದಿನಾಂಕ 15-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ 7ನೇ ತರಗತಿ ಮಕ್ಕಳಿಗೆ 5 ಲಕ್ಷ ರೂ.ಸ್ಕಾಲರ್‌ಶಿಪ್‌ನ್ನು ನೀಡಲಾಗುತ್ತದೆ.ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದರು.ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ : 9611075173,8618927278,8088435282ನ್ನು ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಶಾಲೆಯ ಮುಖ್ಯಗುರುಮಾತೆ ರೇಖಾ ಎಂ.ಎಸ್. ಹಾಗೂ ಶಿಕ್ಷಕರು ಇದ್ದರು.





