ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ಮುದ್ದೇಬಿಹಾಳ : ರಾಜ್ಯದಲ್ಲಿರುವ ಬಹುತೇಕ ಮಠಗಳು ದೊಡ್ಡವರಿಗೆ,ಸಿರಿವಂತರಿಗೆ ತೆರೆದುಕೊಳ್ಳುವ ಕೆಲಸ ಮಾಡುತ್ತಿದ್ದರೆ .ಯರಝರಿಯ ಯಲ್ಲಾಲಿಂಗೇಶ್ವರ ಮಠದ ಜನಸಾಮಾನ್ಯರ,ಧ್ವನಿ ಇಲ್ಲದವರಿಗೆ ಧ್ವನಿ ತುಂಬುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಹೇಳಿದರು.

ತಾಲ್ಲೂಕು ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನವರಾತ್ರೋತ್ಸವ,ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ,ವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಕೀಯ ಶಕ್ತಿ ಯಾವ ಮಠಗಳು ಎರಡನೆ ಹಂತದ ನಾಯಕರನ್ನು ಬೆಳೆಸುವ ಕಾರ್ಯ ಯರಝರಿ ಮಠ ಮಾಡಿದೆ.ಯರಝರಿಯ ಮಠ ಎರಡನೇ ಸಾಲಿನ ನಾಯಕರನ್ನು ಬೆಳೆಸುವ ಮಠವಾಗಿದೆ. ದೇಶದ ಭವಿಷ್ಯ ಪ್ರತಿಭಾವಂತ ಮಕ್ಕಳ ಮೇಲಿದೆ.ಇಂದಿನ ಮಕ್ಕಳು ಗೂಗಲ್ ಮಾತುಗಳನ್ನು ಕೇಳುವ ಮಕ್ಕಳಾಗಿದ್ದಾರೆ.ಆದರೆ ಯರಝರಿಯ ಮಠ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಬ್ಬ ಹರಿದಿನಗಳು,ನಮ್ಮ ಪರಂಪರೆಯ ಕುರಿತು ತಿಳಿಸಿಕೊಡುತ್ತಿದ್ದು ತಂದೆ ತಾಯಿ ಸಂಬAಧಗಳ ಮೌಲ್ಯಗಳನ್ನು ಸಾರುತ್ತಿದೆ ಎಂದರು.

ಸಮಾಜ ಸೇವಕ ಎಂ.ಎನ್.ಮದರಿ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿರುವ ಮಕ್ಕಳಿಗೆ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಪಾಸಿಂಗ್ ಪ್ಯಾಕೇಜ್ ಪುಸ್ತಕಗಳನ್ನು ತಾಲ್ಲೂಕಿನ 4000 ವಿದ್ಯಾರ್ಥಿಗಳಿಗೆ ವಿತರಿಸುವ ಕೆಲಸ ಮಾಡಲಾಗುತ್ತದೆ. ಒಂದೊAದು ಪುಸ್ತಕ 735 ಪುಟಗಳನ್ನು ಹೊಂದಿರಲಿದೆ ಎಂದರು.

ಜಾತ್ರಾ ಕಮೀಟಿ ಸ್ವಾಗತ ಸಮೀತಿ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ ಮಾತನಾಡಿ , ಮಕ್ಕಳಿಗೆ ದುಶ್ಚಟಗಳನ್ನು ದೂರ ಮಾಡಿ ಶಿಕ್ಷಣವಂತರನ್ನಾಗಿಸಬೇಕು.ಯರಝರಿ ಮಠದ ಪರಂಪರೆಯಲ್ಲಿ ಇದೇ ವರ್ಷದಿಂದ ಗ್ರಾಮೀಣ ಭಾಗದ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಪ್ರತಿಭೆಗಳನ್ನು ಪೋಷಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಒಂದೇ ವೇದಿಕೆಯಲ್ಲಿ ಕುರುಬ ಸಮಾಜದ ಮುಖಂಡರ ಸಂಗಮ:

ಮುದ್ದೇಬಿಹಾಳ ಮತಕ್ಷೇತ್ರದ ಅಡವಿ ಹುಲಗಬಾಳದ ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಆಯೋಜಿಸುವ ಜಿಪಂ ಮಾಜಿ ಸದಸ್ಯ ನಿಂಗಪ್ಪಗೌಡ ಬಪ್ಪರಗಿ, ಖಿಲಾರಹಟ್ಟಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಸಮಾಜ ಸೇವಕ ಎಂ.ಎನ್.ಮದರಿ, ಜಟ್ಟಗಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಯರಝರಿಯಲ್ಲಿ ಇಪ್ಪತ್ತು ವರ್ಷಗಳಿಂದ ಸಾಮೂಹಿಕ ವಿವಾಹ ಸಂಘಟಿಸುತ್ತಿರುವ ಮಲಕೇಂದ್ರಗೌಡ ಪಾಟೀಲ ಅವರು ಹಲವು ದಿನಗಳ ಬಳಿಕ ಕುರುಬ ಸಮಾಜದ ಮುಖಂಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಯಿತು.

ನಮ್ಮದು ಸಮಾಜ ದೊಡ್ಡದು ಎನ್ನಬೇಡಿ.ಗ್ರಾಮ ಪಂಚಾಯತಿ ಸ್ಥಾನವೇ ಸಮುದ್ರ ಎಂದು ತಿಳಿದುಕೊಳ್ಳಬೇಡಿ.ನಿಮ್ಮಲ್ಲಿರುವ ಒಗ್ಗಟ್ಟನ್ನು ಬಲಪಡಿಸಿ.ನಾನು ಕೈ ಹಿಡಿದು ಮೇಲೆತ್ತುವವನೇ ಹೊರತರು ಯಾರ ಕಾಲನ್ನು ಹಿಡಿದು ಜಗ್ಗಿಲ್ಲ.ಮತಕ್ಷೇತ್ರದಲ್ಲಿ ಸಮಾಜದವರಿಂದ ಕ್ರಾಂತಿಯಾಗಬೇಕು.
—-ಮಲ್ಲಾರಲಿAಗ ಸ್ವಾಮೀಜಿ,ಯಲ್ಲಾಲಿಂಗೇಶ್ವರ ಮಠ,ಯರಝರಿ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ