BJP Rebels Basanagouda patil yatnal vs BY Vijayendra

ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

ಬೆಂಗಳೂರು: ಪಕ್ಷದಿಂದ ಉಚ್ಚಾಟನೆಗೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮತ್ತೆ ಪಕ್ಷದ ವಿರುದ್ಧ ತಮ್ಮ ಟೀಕೆ ಮುಂದುವರಿಸಿದ್ದು, ತಮ್ಮನ್ನು ಉಚ್ಚಾಟನೆ ಮಾಡಿದ ಕ್ರಮವನ್ನು ಪ್ರಶ್ನಿಸಿದ್ದಾರೆ.

ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ್ದಾರೆ.

ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ ಎಂದಿದ್ದಾರೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ಬೇಸರ ಹೋರಹಾಕಿದ್ದಾರೆ.

ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ ಎಂದು ದೂರಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ಅಡ್ಜಸ್ಟ್ಮೆಂಟ್ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ ಎಂದು ನೋವು ತೊಡಿಕೊಂಡಿದ್ದಾರೆ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ ಎಂದು ತಿವಿದಿದ್ದಾರೆ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಗುಟುರು ಹಾಕಿದ್ದಾರೆ.

ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಶ್ರೀ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು ಎಂದು ನೆನಪು ಮಾಡಿಕೊಟ್ಟಿದ್ದಾರೆ.

ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ ಎಂದಿದ್ದಾರೆ.

ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ ಎಂದಿದ್ದಾರೆ.

Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮತ್ತೆ ಅವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟವಾಗಿ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ರೆಬೆಲ್ ನಾಯಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು