Yoga day inspiration for building great India

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಶಿವಕುಮಾರ ಎಸ್ ಮಲಘಾಣ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಶ್ರೀ ‌ಸಂಗಮನಾಥ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ‌ ಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ಹನ್ನೊಂದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ ಶಿಕ್ಷಕ ಬಿ ಅರ್ ಸಿ ಐ.ಸಿ. ಮಠಪತಿ ಮಾತನಾಡಿ, ಭಾರತೀಯತೆಯನ್ನು ಸಂಭ್ರಮಿಸಬೇಕಾದ ದಿನ ಇದಾಗಿದೆ. ವಿಶ್ವದ ಅಂದಾ ಜು 190 ರಾಷ್ಟ್ರಗಳಲ್ಲಿ ಯೋಗದಿನ ಆಚರಿಸಲಾಗುತ್ತಿದೆ. ಯೋಗದ ರಾಯಬಾರಿಯಾಗಿ ನಮ್ಮ ಪ್ರಧಾನಿಯವರು ನಮ್ಮ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ್ದಾರೆ ನಮ್ಮ ಸನಾತನ ಸಂಸ್ಕೃತಿಯ ಭಾಗವಾದ ಯೋಗ, ಆಯುರ್ವೇದ ಹಾಗೂ ಆಧ್ಯಾತ್ಮಿಕತೆಯನ್ನು ಉಳಿಸಿ, ಬೆಳೆಸುವ ಕಾರ್ಯವಾಗಬೇಕು ಎಂದು ಹೇಳಿದರು.

ಎಪಿಎಂಸಿ ಉಪಾಧ್ಯಕ್ಷ‌ ಬೀಮಸಿ ಮೆಟಗುಡ್ಡ ಆಡಳಿತಾಧಿಕಾರಿ ಮಲ್ಲು ಕಳ್ಳೆನ್ನವರ, ಯೋಗ ಶಿಕ್ಷಕ ಐ.ಸಿ. ಮಠಪತಿ, ಮುಖ್ಯ ಶಿಕ್ಷಕ‌ ವೆಂಕಟೇಶ‌ ಗುಡೆಪ್ಪನವರ ಪ್ರಾಚಾರ್ಯ ಸುರೇಶ್ ಭಜಂತ್ರಿ ಇತರರಿದ್ದರು.

ವಿದ್ಯಾರ್ಥಿಗಳಿಂದ ಯೋಗ ದಿನಾಚರಣೆಯ ‌ನಿಮಿತ್ಯ ವಿವಿದ ಭಂಗಿಯ ಯೋಗ ನೃತ್ಯ ಹಾಗೂ ಸಂಗೀತ ದಿನಾಚರಣೆಯ‌ ನೃತ್ಯ ಹಾಗೂ ಗಾಯನ ಜರುಗಿದವು. ಭವಾನೇಶ್ವರಿ ಲೋಂಡೆ‌ ನಿರೂಪಿಸಿ ವಂದಿಸಿದರು

ಮುಧೋಳ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿ.ಪಂ ಮಾಜಿ‌ ಅಧ್ಯಕ್ಷ ಶಿವಕುಮಾರ ಮಲಘಾಣ ಉದ್ಘಾಟಿಸಿದರು. ಎಪಿಎಂಸಿ ಉಪಾಧ್ಯಕ್ಷ ಭೀಮಸಿ ಮೆಟಗುಡ್ಡ, ಮಲ್ಲು ಕಳ್ಳೆನ್ನವರ, ಐ.ಸಿ. ಮಠಪತಿ, ಸುರೇಶ ಭಜಂತ್ರಿ, ವೆಂಕಟೇಶ ಗುಡೆಪ್ಪನವರ ಇತರರಿದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ