ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.

ಆಸ್ಪತ್ರೆಯ ಎದುರಿಗೆ ಏಕಾಂಗಿಯಾಗಿ ಕೂತು ಪ್ರತಿಭಟನೆ ನಡೆಸುತ್ತಿದ್ದ ಯುವಕ ವೀರೇಶ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಎಲ್ಲೂ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮÃ ಚೌಧರಿ ಅವರ ಹೆಸರು ದುರುಪಯೋಗ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದಾನೆ.

ಮಾತ್ರೆಗಳನ್ನು ನುಂಗಿ ಆಸ್ಪತ್ರೆಯ ಆವರಣದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದು ಆಸ್ಪತ್ರೆಯ ಅಧಿಕಾರಿಗಳ ಮತ್ತು ಸಿಬ್ಬಂದಿ ವಿರುದ್ದ ಆರೋಪ ಮಾಡಿದ್ದಾನೆ.ಆಸ್ಪತ್ರೆಯ ಅವ್ಯವಸ್ಥೆಯ ಸುಧಾರಣೆಗೆಪತ್ರ ಮುಖೇನ ಹೋರಾಟ ನಡೆಸಿದ್ದರ ಫಲವಾಗಿ ಈ ರೀತಿ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದ್ದಾನೆ.

ನನ್ನ ಸಾವಿಗೆ ಇಲಾಖೆಯವರು ಸೇರಿದಂತೆ 61 ಜನರೇ ಹೊಣೆ ಎಂದು ದೂರಿದ್ದಾನೆ.ಅಸ್ವಸ್ಥಗೊಂಡಿದ್ದ ವೀರೇಶನನ್ನು ತಕ್ಷಣ ಸ್ಥಳೀಯ ಪೋಲೀಸರು ತಾಲೂಕಾಸ್ಪತ್ರೆಗೆ ರವಾನಿಸಿದರು.ಆದರೆ ದಲಿತ ಸಮಾಜದವರು ಹೋರಾಟ ಮಾಡಿದರೆ ಅದನ್ನು ಹತ್ತಿಕ್ಕುವುದು ಹಾಗೂ ದಲಿತ ಸಮಾಜದವರ ಹೋರಾಟಗಳಿಗೆ ಯಾವುದೇ ನ್ಯಾಯ ಈ ತಾಲ್ಲೂಕಿನಲ್ಲಿ ಸಿಗುವುದಿಲ್ಲ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ.

Latest News

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ:                                            ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಏಕಲವ್ಯ ರೋಲರ್

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ :                                      ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನಡೆಸುವ ನೇಕಾರರು ಗ್ರಾಮೀಣ ಭಾಗದಲ್ಲಿ ಸಂಕಷ್ಟದಲ್ಲಿದ್ದು ಅವರಿಗೆ ಸರ್ಕಾರ ಸೂಕ್ತ ನೆರವು ಒದಗಿಸಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹೇಳಿದರು. ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ 27ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.ನೇಕಾರರ ಬದುಕು