ಮಂಗಳೂರು: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ಯುವಕರ ಗುಂಪೊಂದು ಒಂಟಿ ಯುವತಿಯೊಂದಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ಧಾರ್ಮಿಕ ಆಚರಣೆ ವೇಳೆ ಕೇಸರಿ ಶಾಲು ಹಾಕಿದ್ದ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಈ ಘಟನೆ ದಕ್ಷಿಣ ಕನ್ನಡದಲ್ಲಿ ಸಂಭವಿಸಿದೆ.
ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ದಿನ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ, ನೃತ್ಯ ಮೆರವಣಿಗೆ ಸಾಗಿ ಹಬ್ಬವನ್ನಾಚರಿಸುತ್ತಾರೆ. ಆದರೆ, ಧಾರ್ಮಿಕ ಮೆರವಣಿಗೆಯಲ್ಲಿ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿ ಹುಚ್ಚಾಟ ಮೆರೆದಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ.
ವೈರಲ್ ವಿಡಿಯೋದಲ್ಲಿ ಯುವಕರ ಗುಂಪಿನ ನಡುವೆ ಒಂಟಿ ಯುವತಿಯೊಬ್ಬಳು ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡಿದ್ದ ಯುವಕನೊಬ್ಬ ಆಕೆಯನ್ನು ತಬ್ಬಿಕೊಂಡು ಅಶ್ಲೀಲವಾಗಿ ವರ್ತಿಸಿದ್ದಾನೆ.
ಈ ವೇಳೆ ಇರುಸುಮುರುಸುಗೊಂಡ ಯುವತಿ ಆತನನ್ನು ದೂರ ತಳ್ಳಿ ಅಲ್ಲಿಂದ ಬೇರೆಡೆ ಹೋಗಲು ಪ್ರಯತ್ನಿಸಿರುವುದನ್ನು ವಿಡಿಯೋದಲ್ಲಿ (Viral video) ನೋಡಬಹುದು.
ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)
ಈ ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ, ದಕ್ಷಿಣ ಕನ್ನಡದಲ್ಲಿ ಇದೆಂಥಾ ಸಂಸ್ಕೃತಿ? ಇದು ಯಾವ ರೀತಿಯ ಅಷ್ಟಮಿ ಆಚರಣೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Hello @vedavyasbjp @URajeshNaik
— Lavanya Ballal Jain (@LavanyaBallal) August 30, 2024
What kind of behaviour have you imported to Dakshina Kannada. What kind of krishna ashtami celebrations are these?pic.twitter.com/dP8wThM3nR