young man wrote a death note saying that he could not find a girl to love

Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಶಿವಮೊಗ್ಗ : ಪ್ರೀತಿ ಮಾಡಲು ಹುಡುಗರ
ತರೇವಾರಿ ಸಾಹಸ ಮಾಡಿ ಸುದ್ದಿಯಾಗಿದ್ದು ಇದೆ. ಆದರೆ ಇಲ್ಲೊಬ್ಬ ಯುವಕ ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಹೌದು, ತೀರ್ಥಹಳ್ಳಿಯ ಜಯದೇವ್ (24) ನಾಪತ್ತೆಯಾಗಿರುವ ಯುವಕ ಈ ರೀತಿ ಮಾಡಿದ್ದಾನೆ.

‘ನನಗಿಂತ ಸಣ್ಣವರಿಗೆ ಲವ್ ಮಾಡಲು ಹುಡುಗಿಯರು ಇದ್ದಾರೆ. ಆದರೆ ನನಗೆ ಒಬ್ಬಳು ಕೂಡ ಲವ್ವ‌ರ್ ಇಲ್ಲ’ ಎಂದು ಯುವಕ ಬರೆದುಕೊಂಡಿದ್ದಾನೆ. ಜೊತೆಗೆ, ಮನಿ ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ 90,000 ಹಣಗಳ ಕಳೆದುಕೊಂಡಿರುವ ಬಗ್ಗೆ ಕೂಡ ಉಲ್ಲೇಖಿಸಿದ್ದಾನೆ.

ಕಳೆದ ಮೂರು ವರ್ಷಗಳಿಂದ ಉಪ್ಪಿಲ್ಲದ ಊಟದಂತೆ ನನ್ನ ಬದುಕು ಆಗಿದೆ. ನನಗಿಂತ ಚಿಕ್ಕ ಹುಡುಗರೆಲ್ಲ ಅವರ ಲವರ್ ಜೊತೆ ಮಾತನಾಡುತ್ತಿರುತ್ತಾರೆ. ಇದನ್ನೆಲ್ಲ ನೋಡಿ ನನಗೆ ಜೀವನವೇ ಬೇಡವೆಂಬಾತಾಗಿದೆ ಎಂದು ಬರೆದಿದ್ದಾನೆ.

ಕಳೆದ ಕೆಲ ದಿನಗಳ ಹಿಂದೆ ನಾನು ಒನ್ ಸೈಡ್ ಲವ್ ಮಾಡಿದ್ದ ಹುಡುಗಿಗೆ ಪ್ರಪೋಸ್ ಮಾಡಿದಾಗ ಅವಳು ಕೂಡ ನನ್ನನ್ನ ರಿಜೆಕ್ಟ್ ಮಾಡಿದ್ದಾಳೆ. ಈ ಘಟನೆಯಿಂದಾಗಿ ತನಗೆ ಲವ್ ಮಾಡಲು ಹುಡುಗಿ ಸಿಗುತ್ತಿಲ್ಲ ಎಂದು ಜಯದೇವ್ ಬೇಸರ ವ್ಯಕ್ತಪಡಿಸಿದ್ದಾನೆ.

ನನ್ನ ಸಾವಿಗೆ ನನ್ನ ಕೆಟ್ಟ ನಿರ್ಧಾರಗಳೇ ಕಾರಣ ಎಂದು ವಾಟ್ಸ್‌ಆ್ಯಪ್ ನಲ್ಲಿ ಜಯದೇವ್ ಬರೆದುಕೊಂಡು, ದಯವಿಟ್ಟು ನನ್ನನು ಕ್ಷಮಿಸಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾನೆ. (Love story)

ಇದನ್ನೂ ಓದಿ: Viral video: ಕೇಸರಿ ಶಾಲು ಧರಿಸಿ ಯುವತಿಯೊಂದಿಗೆ ಅಶ್ಲೀಲವಾಗಿ ಯುವಕ ನೃತ್ಯ.. (ವಿಡಿಯೋ ವೈರಲ್)

ಸದ್ಯ, ತೀರ್ಥಳ್ಳಿಯ ತುಂಗಾ ನದಿಯಲ್ಲಿ ಜಯದೇವ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಯುವಕನಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ