Zika virus: First victim of Zika virus in Karnataka

Zika virus: ಕರ್ನಾಟಕದಲ್ಲಿ ಝೀಕಾ ವೈರಸ್ ಗೆ ಮೊದಲ‌ ಬಲಿ‌!

Zika virus: ಕರ್ನಾಟಕದಲ್ಲಿ ಝೀಕಾ ವೈರಸ್ ಗೆ ಮೊದಲ‌ ಬಲಿ‌!

ಬೆಂಗಳೂರು: ಝೀಕಾ ವೈರಸ್ (Zika virus) ಗೆ 73 ವರ್ಷದ ವೃದ್ಧ ಸಾವನ್ನಪ್ಪುವ ಮೂಲಕ ರಾಜ್ಯದಲ್ಲಿ ಮೊದಲ ಬಲಿ ಶಿವಮೊಗ್ಗ ಜಿಲ್ಲೆಯಲ್ಲಿ ಆಗಿದೆ.

ಬೆಂಗಳೂರಲ್ಲಿ 6 ಹಾಗೂ ಶಿವಮೊಗ್ಗದಲ್ಲಿ ಮೂವರು ಸೇರಿದಂತೆ 9 ಪ್ರಕರಣಗಳು ಇಂದು ಪತ್ತೆಯಾಗಿವೆ.

Join Our Telegram: https://t.me/dcgkannada

ಝೀಕಾ (Zika virus) ಹೆಚ್ಚಾಗಿ ಕಂಡುಬಂದಿರುವ ಸ್ಥಳಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಿ. ಶಿವಮೊಗ್ಗ 3 ಹಾಗೂ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಜನರಿಗೆ ಝೀಕಾ ವೈರಸ್ ಪತ್ತೆಯಾಗಿದೆ. ಬೆಂಗಳೂರಿನ ಜಿಗಣಿಯಲ್ಲಿ 5 ಮಹಿಳೆಯರಿಗೆ ಝೀಕಾ ಪತ್ತೆಯಾಗಿದ್ದು, ವೈರಸ್ ಗೆ ತುತ್ತಾದ ಗರ್ಭೀಣಿ ಸ್ತ್ರೀಯರ ಆರೈಕೆಗೆ ಹೆಚ್ಚಿನ ಒತ್ತು ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊರದೇಶಗಳಲ್ಲಿ ಮಂಕಿಪಾಕ್ಸ್ ವೈರಸ್ ಕಂಡಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಇಂದು ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತೆ ಕ್ರಮಗಳ ಕುರಿತು ಚರ್ಚೆ ನಡೆಸಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಒಂದು ವೇಳೆ ಮಂಕಿಪಾಕ್ಸ್ ವೈರಸ್ ಪತ್ತೆಯಾದರೆ ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾಸ್ಪತ್ರೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಬೇಕು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಇಲ್ಲಿಯ ವರೆಗೆ ಮಂಕಿಪಾಕ್ಸ್ ಬಂದಿಲ್ಲ. ಮೆಡಿಕಲ್ ಏಮರ್ಜನ್ಸಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ ಹೊರದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಹಿನ್ನೆಲೆಯಲ್ಲಿ ವಿಶ್ವಾರೋಗ್ಯ ಸಂಸ್ಥೆ ಮೆಡಿಕಲ್ ಏಮರ್ಜೆನ್ಸಿ ಘೋಷಿಸಿದೆ.

ಇದನ್ನ ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗೃತೆ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ತಯಾರಿಗಳನ್ನ ಮಾಡಿಕೊಳ್ಳಿ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..!

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ.

ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.

ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಮುಖಂಡರಾಗಿದ್ದರು ಎನ್ನಲಾಗಿದೆ. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್​ನಲ್ಲಿ ಈ ಘಟನೆ ಸಂಭವಿಸಿದೆ.

ಕೂಡಲೇ ಹೃದಯಾಘಾತಕ್ಕೀಡಾದ ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ