ಕುಳಗೇರಿ ಕ್ರಾಸ್: ಸಮೀಪದ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆಗೊಂಡಿತ್ತು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಲಕೊಪ್ಪದ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.
ಬಾಲಕಿಯರ ಕಬ್ಬಡ್ಡಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವೈಯಕ್ತಿಕ ಆಟಗಳಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಆಡಳಿತ ಹಾಗೂ ಎಸ್.ಡಿ.ಎಂ.ಸಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.